ಹಾವೇರಿ:ತೀವ್ರ ಕುತೂಹಲ ಮೂಡಿಸಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಅಖಂಡ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ 7,491 ಜನಪ್ರತಿನಿಧಿಗಳು ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ಈ ಪೈಕಿ, ಧಾರವಾಡ ಜಿಲ್ಲೆಯಲ್ಲಿ 2,165 ಜನಪ್ರತಿನಿಧಿಗಳಿದ್ದರೆ, ಗದಗ ಜಿಲ್ಲೆಯಲ್ಲಿ 1,967 ಮತದಾರರಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ 3,359 ಮತದಾರರಿದ್ದು, ಪರಿಷತ್ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವನ್ನು ಹಾವೇರಿ ಜಿಲ್ಲೆಯ ಸ್ಥಳೀಯ ಜನಜನಪ್ರತಿನಿಧಿಗಳು ವಹಿಸುತ್ತಾರೆ. ಈಗಾಗಲೇ ಎರಡೂ ರಾಷ್ಟ್ರೀಯ ಪಕ್ಷಗಳು ಅತಿಹೆಚ್ಚು ಮತದಾರರಿರುವ ಹಾವೇರಿ ಜಿಲ್ಲೆಗೆ ಹೆಚ್ಚು ಮಹತ್ವ ನೀಡಿವೆ. ಬಿಜೆಪಿ ಪ್ರದೀಪ್ ಶೆಟ್ಟರ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ ಸಲೀಂ ಅಹ್ಮದ್ ಅವರನ್ನು ಸ್ಪರ್ಧೆಗಿಳಿಸಿದೆ.