ಹಾವೇರಿ:ಕಾನ್ಸ್ಟೇಬಲ್ಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಬಂದ್ ಮಾಡಲಾಗಿದ್ದ ಹಾವೇರಿ ಶಹರ ಪೊಲೀಸ್ ಠಾಣೆಯನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ.
ಹಾವೇರಿ ಶಹರ ಪೊಲೀಸ್ ಠಾಣೆ ಮತ್ತೆ ಕಾರ್ಯಾರಂಭ - Haveri city police station
ಕಾನ್ಸ್ಟೇಬಲ್ಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಬಂದ್ ಮಾಡಲಾಗಿದ್ದ ಹಾವೇರಿ ಶಹರ ಪೊಲೀಸ್ ಠಾಣೆಯನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ.
![ಹಾವೇರಿ ಶಹರ ಪೊಲೀಸ್ ಠಾಣೆ ಮತ್ತೆ ಕಾರ್ಯಾರಂಭ Haveri police station reopen](https://etvbharatimages.akamaized.net/etvbharat/prod-images/768-512-8070682-950-8070682-1595042754911.jpg)
ಕೊರೊನಾ ಸೋಂಕಿಗೀಡಾಗಿದ್ದ ಕಾನ್ಸ್ಟೇಬಲ್ಗಳ ಆರೋಗ್ಯ ಸುಧಾರಿಸಿದ್ದು, ಅವರ ಮರು ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದ ಹಿನ್ನೆಲೆ ಠಾಣೆಯನ್ನು ಆರಂಭಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಹಲವು ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ನಗರ ಠಾಣೆಯ ಮುಂದೆ ಬ್ಯಾರಿಕೇಡ್ ಹಾಕಲಾಗಿದೆ. ಹಾಗೂ ಠಾಣೆಗೆ ಬರುವವರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.
ಅಲ್ಲದೇ, ಅವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಕಾನ್ಸ್ಟೇಬಲ್ಗಳಿಗೆ ಸೋಂಕು ತಗುಲಿದ ಹಿನ್ನೆಲೆ ಶಹರ ಠಾಣೆಯನ್ನು ಸಂಚಾರಿ ಠಾಣೆಯಿಂದ ನಿರ್ವಹಣೆ ಮಾಡಲಾಗುತ್ತಿತ್ತು.