ಹಾವೇರಿ: ಜೂನ್ 8ರ ಸೋಮವಾರದಿಂದ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಹಾವೇರಿ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಸಕಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಹಾವೇರಿ: ವೀರಭದ್ರೇಶ್ವರನ ದರ್ಶನಕ್ಕೆ ಸಕಲ ಸಿದ್ಧತೆ, ಮುನ್ನೆಚ್ಚರಿಕೆ ಕ್ರಮ - ಕೊರೊನಾ ಸೋಂಕು ನ್ಯೂಸ್
ಹಾವೇರಿ ನಗರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇವಸ್ಥಾನದ ಗರ್ಭಗುಡಿ, ಹೊರಾಂಗಣವನ್ನು ಶುಚಿಗೊಳಿಸಲಾಗುತ್ತಿದೆ. ಭಕ್ತರ ದರ್ಶನಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಾಕ್ಸ್ ಗಳನ್ನು ಹಾಕಲಾಗಿದ್ದು, ಸ್ಯಾನಿಟೈಸರ್ ಸಿಂಪಡಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಹಾವೇರಿ: ವೀರಭದ್ರೇಶ್ವರನ ದರ್ಶನಕ್ಕೆ ಸಕಲ ಸಿದ್ಧತೆ, ಮುನ್ನೆಚ್ಚರಿಕಾ ಕ್ರಮ
ನಗರದ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿ, ಹೊರಗಿನ ಆವರಣವನ್ನು ಶುಚಿಗೊಳಿಸಲಾಗುತ್ತಿದೆ. ಭಕ್ತರ ದರ್ಶನಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಾಕ್ಸ್, ಸ್ಯಾನಿಟೈಸರ್ ಸಿಂಪಡಿಸಲು ಸಿದ್ಧತೆ ನಡೆದಿದೆ.
ಭಕ್ತರು ಮಾಸ್ಕ್ ಧರಿಸಿಕೊಂಡು ದೇವಸ್ಥಾನಕ್ಕೆ ಬರಬೇಕು. ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆಯೇ ಹೊರತು ತೀರ್ಥ, ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಭಕ್ತರ ಥರ್ಮಲ್ ಸ್ಕ್ರೀನಿಂಗ್ ನಂತರವೇ ದೇಗುಲ ಪ್ರವೇಶಕ್ಕೆ ಅನುಮತಿಸಲಾಗುತ್ತದೆ ಎಂದು ಅರ್ಚಕರು ತಿಳಿಸಿದ್ದಾರೆ.