ನವದೆಹಲಿ/ಹಾವೇರಿ: ವಿಶ್ವ ಓಝೋನ್ ದಿನದ ನಿಮಿತ್ತ ನಡೆದ ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾವೇರಿ ತಾಲೂಕು ಕನವಳ್ಳಿ ಗ್ರಾಮದ ವಿದ್ಯಾರ್ಥಿನಿ ತೃತೀಯ ಸ್ಥಾನ ಪಡೆದಿದ್ದಾಳೆ.
ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಹಾವೇರಿ ವಿದ್ಯಾರ್ಥಿನಿ - ವಿಶ್ವ ಓಝೋನ್ ದಿನ
ಕನವಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ವಿಶ್ವ ಓಝೋನ್ ದಿನದ ನಿಮಿತ್ತ ನಡೆದ ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ.
ಸಾನಿಯ ಬಾನು
ಕನವಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲೆಯ 10ನೇ ತರಗತಿ ಸಾನಿಯ ಬಾನು ಪ್ರಶಸ್ತಿ ಪಡೆದ ವಿದ್ಯಾರ್ಥಿನಿ. ಭಾರತ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆ ಈ ಸ್ಪರ್ಧೆ ಆಯೋಜಿಸಿತ್ತು. ಸಾನಿಯಾ ಬಾನುವಿನ ಈ ಸಾಧನೆಗೆ ಶಾಲಾ ಶಿಕ್ಷಕರು, ಡಿಡಿಪಿಐ, ಬಿಇಒ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.