ಹಾವೇರಿ: ಜಿಲ್ಲಾದ್ಯಂತ ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಸರಾಸರಿ 3.5 ಮಿ.ಮೀ ಮತ್ತು ಗುರುವಾರ ಸರಾಸರಿ 12.5 ಮಿ.ಮೀ ಮಳೆ ಸುರಿದಿದೆ.
ಹಾವೇರಿ ಜಿಲ್ಲಾದ್ಯಂತ ಭಾರಿ ಮಳೆ: ರೈತರ ಮೊಗದಲ್ಲಿ ಮಂದಹಾಸ - Havri Rain
ಹಾವೇರಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಸಕಾಲಕ್ಕೆ ಮಳೆಯಾಗಿರುವುದರಿಂದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.
ಹಾವೇರಿ ಜಿಲ್ಲೆಯಾದ್ಯಂತ ಭಾರೀ ಮಳೆ
ಹಾನಗಲ್ ತಾಲೂಕಿನಲ್ಲಿ ಅತಿ ಹೆಚ್ಚು 25 ಮಿ.ಮೀ ಮಳೆಯಾಗಿದ್ದರೆ, ಹಿರೇಕೆರೂರು ತಾಲೂಕಿನಲ್ಲಿ ಅತಿ ಕಡಿಮೆ 7.2 ಮಿ.ಮೀ ಮಳೆಯಾಗಿದೆ. ಎಡೆ ಬಿಡದೇ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿವೆ.
ಸಕಾಲಕ್ಕೆ ವರುಣ ಕೃಪೆ ತೋರಿರುವುದು ರೈತರ ಮೊಗದಲ್ಲೂ ಮಂದಹಾಸ ಮೂಡುವಂತೆ ಮಾಡಿದೆ. ರೈತರು ಎಡೆ ಕುಂಟಿ ಸೇರಿದಂತೆ ಗೊಬ್ಬರ ಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ.