ಹಾವೇರಿ:ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮದ ಬಸನಗೌಡ ಪಾಟೀಲ(37) ಮೃತರೆಂದು ತಿಳಿದುಬಂದಿದೆ.
ಹಾವೇರಿ: ಧಾರಾಕಾರ ಮಳೆಗೆ ಗೋಡೆ ಕುಸಿದು ಓರ್ವ ಸಾವು - ಮನೆಯಲ್ಲಿದ್ದ ಇನ್ನಿಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ
ಮಳೆಯಿಂದಾಗಿ ಮನೆ ಗೋಡೆ ಕುಸಿದು ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ: ಧಾರಾಕಾರ ಮಳೆಗೆ ಗೋಡೆ ಕುಸಿದು ಓರ್ವ ಸಾವು
ಮಣ್ಣಿನಡಿ ಸಿಲುಕಿದ್ದ ಬಸನಗೌಡರನ್ನು ಊರಿನವರು ಸೇರಿ ಹೊರತೆಗೆದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯುವಾಗ ಅವರು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಇನ್ನಿಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಮಧ್ಯರಾತ್ರಿ 4 ಗಂಟೆಗಳ ಕಾರ್ಯಾಚರಣೆ: ನೀರಿನಲ್ಲಿ ಸಿಲುಕಿದ್ದ ರೈತನ ರಕ್ಷಣೆ