ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಮುಂದುವರಿದ ವರುಣಾರ್ಭಟ..ಹಲವು ಗ್ರಾಮಗಳ ಸಂಪರ್ಕ ಕಡಿತ!

ಹಾವೇರಿಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಸುಮಾರು 20 ಕ್ಕೂ ಅಧಿಕ ಗ್ರಾಮಸ್ಥರು ಬೇರೆ ಮಾರ್ಗದಿಂದ ಹಾವೇರಿ ಸಂಪರ್ಕಿಸುತ್ತಿದ್ದಾರೆ.

ಹಲವು ಗ್ರಾಮಗಳ ಸಂಪರ್ಕ ಕಡಿತ
ಹಲವು ಗ್ರಾಮಗಳ ಸಂಪರ್ಕ ಕಡಿತ

By

Published : Jul 23, 2021, 2:15 PM IST

ಹಾವೇರಿ: ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಾನಗಲ್ ತಾಲೂಕಿನ ಕೂಡಲ ಮತ್ತು ಹಾವೇರಿ ತಾಲೂಕಿನ ನಾಗನೂರು ನಡುವೆ ಇರುವ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತವಾಗಿದೆ.

ಹಾವೇರಿಯಲ್ಲಿ ಮುಂದುವರಿದ ವರುಣಾರ್ಭಟ

ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದ್ದು, ಜನತೆ ಇತರ ಮಾರ್ಗಗಳ ಮೂಲಕ ಸಂಚರಿಸುತ್ತಿದ್ದಾರೆ. ಸವಣೂರು ತಾಲೂಕಿನ ಕಳಸೂರು ಮತ್ತು ಹಾವೇರಿ ಜಿಲ್ಲಾಡಳಿತ ಕಚೇರಿ ನಡುವೆ ಇರುವ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತವಾಗಿದೆ. ಇದರಿಂದಾಗಿ ಸುಮಾರು 20ಕ್ಕೂ ಅಧಿಕ ಗ್ರಾಮಸ್ಥರು ಬೇರೆ ಮಾರ್ಗದಿಂದ ಹಾವೇರಿ ಸಂಪರ್ಕಿಸುತ್ತಿದ್ದಾರೆ.

ವರದಾ, ತುಂಗಭದ್ರಾ, ಧರ್ಮ, ಕುಮದ್ವತಿ ನದಿಗಳ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ನದಿಗಳು ಮೈದುಂಬಿ ಹರಿಯುತ್ತಿವೆ. ಈ ನದಿಗಳಿಗೆ ಕಟ್ಟಲಾಗಿದ್ದ ಕೆಲ ಸೇತುವೆಗಳು ಜಲಾವೃತಗೊಂಡಿವೆ. ನದಿಗಳ ಸಮೀಪವಿರುವ ಗ್ರಾಮಗಳಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕೆಲ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಆಲಮಟ್ಟಿ ಡ್ಯಾಂನಿಂದ 1.70 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ..ಮಹಾರಾಷ್ಟ್ರದ ಗಡಿಯಲ್ಲಿ ಹೆಚ್ಚಿದ ಆತಂಕ!

ನದಿ ಬಳಿಯಿರುವ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಶೇಂಗಾ, ಸೋಯಾಬಿನ್, ಗೋವಿನ ಜೋಳ ಬೆಳೆಗಳಿಗೆ ನೀರು ನುಗ್ಗಿದೆ. ಕೆಲವೆಡೆ ಅತಿಯಾದ ಮಳೆಯಿಂದ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇದೇ ರೀತಿ ಮುಂದುವರೆದರೆ ಬೆಳೆಗಳಿಗೆ ತೊಂದರೆಯಾಗುತ್ತೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details