ಹಾವೇರಿ: ಜಿಲ್ಲೆಯ ಹಲವೆಡೆ ತಡರಾತ್ರಿ ಭಾರಿ ಮಳೆಯಾಗಿದ್ದು, ಸಂತೆ ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿಹೋಗಿದ್ದ ಇಬ್ಬರು ಯುವಕರನ್ನು ರಕ್ಷಣೆ ಮಾಡಲಾಗಿದೆ.
ಹಾವೇರಿಯಲ್ಲಿ ಭಾರಿ ಮಳೆ: ಬೈಕ್ ಸಮೇತ ಕೊಚ್ಚಿ ಹೋಗಿದ್ದ ಇಬ್ಬರ ರಕ್ಷಣೆ - ಹಾವೇರಿ ಮಳೆ
ಸಂತೆ ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ.
![ಹಾವೇರಿಯಲ್ಲಿ ಭಾರಿ ಮಳೆ: ಬೈಕ್ ಸಮೇತ ಕೊಚ್ಚಿ ಹೋಗಿದ್ದ ಇಬ್ಬರ ರಕ್ಷಣೆ Heavy rain in Haveri](https://etvbharatimages.akamaized.net/etvbharat/prod-images/768-512-13424021-thumbnail-3x2-lek.jpg)
Heavy rain in Haveri
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ಸಂತೆಹಳ್ಳ ತುಂಬಿ ಹರಿಯುತ್ತಿದೆ. ರಾತ್ರಿ ಕುಮ್ಮೂರು ಗ್ರಾಮದಿಂದ ಬ್ಯಾಡಗಿ ಪಟ್ಟಣಕ್ಕೆ ಸವಾಲ್ ಭಜನೆ ಕಾರ್ಯಕ್ರಮ ನೋಡಿ ಬೆಳಗ್ಗೆ ವಾಪಸ್ ಹೋಗುತ್ತಿದ್ದ ವೇಳೆ ಹಳ್ಳದಲ್ಲಿ ಯುವಕರು ಕೊಚ್ಚಿ ಹೊಗಿದ್ದರು.
ಸಂತೆ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಯುವಕರ ರಕ್ಷಣೆ
ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಸಂತೋಷ ತಡಸದ ಮತ್ತು ಮಂಜು ಮುಳಗುಂದರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗ್ರಾಮಸ್ಥರ ಸಮಯಪ್ರಜ್ಞೆಯಿಂದ ದುರಂತ ತಪ್ಪಿದ್ದು, ಬೈಕ್ ಸಹ ಪತ್ತೆಯಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.