ಹುಬ್ಬಳ್ಳಿ/ಹಾವೇರಿ:ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿನ ಹಲವು ಬಡಾವಣೆಗಳು ಜಲಾವೃತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ.
ನಿರಂತರ ಮಳೆಗೆ ಹುಬ್ಬಳ್ಳಿ, ಹಾವೇರಿ ಜನ ಕಂಗಾಲು..ಹಲವು ಬಡಾವಣೆಗಳು ಜಲಾವೃತ - ಬಡಾವಣೆಗಳು ಜಲಾವೃತ
ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿನ ಹಲವು ಬಡಾವಣೆಗಳು ಜಲಾವೃತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ.
ಸಣ್ಣ ಮಳೆಯಾದರೆ ಸಾಕು ಹುಬ್ಬಳ್ಳಿಯ ಚನ್ನಪೇಟನ ಹಡಗಿ ಓಣಿಯಲ್ಲಿರುವ ಮನೆಗಳಿಗೆ ನೀರು ನುಗ್ಗುವುದು ಸಾಮಾನ್ಯವಾಗಿದೆ. ಮಳೆ ಬಂದ ಪ್ರತಿಸಾರಿಯೂ ಇದೇ ಪರಿಸ್ಥಿತಿಯನ್ನು ಇಲ್ಲಿನ ಜನ ಎದುರಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಸಮಸ್ಯೆ ಬಗ್ಗೆ ಅದೆಷ್ಟೋ ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ನಿವಾಸಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ಜಿಲ್ಲೆಯಾದ್ಯಂತ ಸಂಜೆಯಾಗುತ್ತಿದ್ದಂತೆ ವ್ಯಾಪಕ ಮಳೆಯಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾವೇರಿ ಪ್ರವಾಸಿಮಂದಿರದಲ್ಲಿ ಮಳೆ ನೀರಿನ ಸೆಳೆತಕ್ಕೆ ಬೈಕ್ ಸವಾರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಬೈಕ್ ಸವಾರನನ್ನು ರಕ್ಷಣೆ ಮಾಡಿದ್ದಾರೆ. ನಗರದ ರೈಲ್ವೆ ಕೆಳಸೇತುವೆ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿದೆ. ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.