ಹಾವೇರಿ:ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಸಂಬಂಧ ಒಂದು ಕೋಮಿನ ಯುವಕನ ಮೇಲೆ ಮತ್ತೊಂದು ಕೋಮಿನ ಯುವಕರು ಹಲ್ಲೆ ಮಾಡಿರುವ ಘಟನೆ ಹಿರೇಕೇರೂರು ಪಟ್ಟಣದಲ್ಲಿ ನಡೆದಿದೆ.
ಯುವಕನ ಮೇಲೆ ಹಲ್ಲೆ ಮಾಡಿ ಆತನನ್ನು ಹಿಡಿದುಕೊಂಡು ಹಿರೇಕೇರೂರು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್ಟೇಬಲ್ ಅವರನ್ನು ಅನ್ಯಕೋಮಿನ ಯುವಕರ ಗುಂಪು ತಳ್ಳಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಪೊಲೀಸ್ ಕಾನ್ಸ್ಟೇಬಲ್ ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ 15 ಯುವಕರ ಮೇಲೆ ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.