ಹಾವೇರಿ:ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮನೆಗೆ ತೆರಳಿ ಲಸಿಕೆ ನೀಡಿದ್ದ ಸಂಬಂಧ ತಾಲೂಕು ಆರೋಗ್ಯಾಧಿಕಾರಿಗಳಿಗೆ ಕಾರಣ ಕೇಳಿ ಡಿಎಚ್ಒ ನೋಟಿಸ್ ನೀಡಿದ್ದರು.ಇದಕ್ಕೆ ವೈದ್ಯಾಧಿಕಾರಿ ಉತ್ತರಿಸಿದ್ದಾರೆ.
ದೇಶಾದ್ಯಂತ ಪ್ರಧಾನಿಯವರನ್ನು ಸೇರಿದಂತೆ ರಾಜಕೀಯ ನಾಯಕರು ಕೋವಿಡ್ ಕೇಂದ್ರಗಳಿಗೆ ತೆರಳಿ ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ. ಇದರ ನಡುವೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ವೈದ್ಯಕೀಯ ಸಿಬ್ಬಂದಿಯನ್ನು ತಮ್ಮ ಮನೆಗೆ ಕರೆಸಿಕೊಂಡು ಅವರಿಗೆ ಮತ್ತು ಪತ್ನಿಗೆ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಈ ಸಂಬಂಧ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಗೆ ಕಾರಣ ಕೇಳಿ ಡಿಎಚ್ಒ ಡಾ.ರಾಜೇಂದ್ರ ದೊಡ್ಡಮನಿ ಅವರು ಮಾರ್ಚ್ .2ರಂದು ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿ ಡಾ.ಝಡ್.ಆರ್.ಮಕಾಂದಾರ ಪ್ರತಿಕ್ರಿಯೆ ನೀಡಿದ್ದಾರೆ.