ಹಾವೇರಿ: ಸಿಡಿಲು ಬಡಿದು ರೈತ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸನಿಡನೇಗಿಲು ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನ 55 ವರ್ಷದ ಮಲ್ಲವ್ವ ರಾಯ್ಕರ್ ಎಂದು ಗುರುತಿಸಲಾಗಿದೆ. ಜಮೀನಿಗೆ ಮೆಕ್ಕೆಜೋಳ ಬಿತ್ತನೆಮಾಡಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.

ಜಿಲ್ಲೆಯ ವಿವಿಧಡೆ ಭಾನುವಾರ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿದೆ. ಅಲ್ಲದೇ ಮಳೆ-ಗಾಳಿಗೆ ಹಿರೇಕೆರೂರಿನಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣೆ ಹಾರಿಹೋಗಿದೆ.
ಕೆಲವೆಡೆ ಮರಗಳು ಧರೆಗುರುಳಿದ್ದು ವಿದ್ಯುತ್ ಕಂಬಗಳು ಸಹ ಬಿದ್ದಿವೆ. ಇದರಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಕೆಲಕಾಲ ವ್ಯತ್ಯಯವಾಗಿತ್ತು.