ಹಾವೇರಿ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಏತ ನೀರಾವರಿಗೆ ಪ್ರಾಚೀನ ಇತಿಹಾಸ ಹೊಂದಿರುವ ಹಳ್ಳೂರಿನ ಜಾಗವನ್ನು ಬಳಸಿಕೊಳ್ಳುತ್ತಿರುವುದನ್ನು ಖಂಡಿಸಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಪ್ರಾಚೀನ ಇತಿಹಾಸ ಹೊಂದಿರುವ ಜಾಗ ಏತ ನೀರಾವರಿಗೆ ಬಳಕೆ : ವಿದ್ಯಾರ್ಥಿಗಳಿಂದ ಪ್ರತಿಭಟನೆ - ಪ್ರಾಚೀನ ಇತಿಹಾಸ ಹೊಂದಿರುವ ಜಾಗ ಏತ ನೀರಾವರಿಗೆ ಬಳಕೆ
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಏತ ನೀರಾವರಿಗೆ ಪ್ರಾಚೀನ ಇತಿಹಾಸ ಹೊಂದಿರುವ ಹಳ್ಳೂರಿನ ಜಾಗವನ್ನು ಬಳಸಿಕೊಳ್ಳುತ್ತಿರುವುದನ್ನು ಖಂಡಿಸಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರಿನ ಜಾಗವು ಪ್ರಾಚೀನ ಇತಿಹಾಸ ಹೊಂದಿದೆ. ಇದನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಏತ ನೀರಾವರಿಗೆ ಪ್ರಾಚೀನ ಇತಿಹಾಸ ಹೊಂದಿರುವ ಜಾಗವನ್ನು ಬಳಿಸಿಕೊಳ್ಳುತ್ತಿರುವುದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸುಮಾರು 9 ಸಾವಿರ ವರ್ಷ ಇತಿಹಾಸವಿರುದ ಜಾಗವನ್ನು ಸಿಎಂ ಯಡಿಯೂರಪ್ಪ ಪ್ರತಿನಿಧಿಸುವ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಹಾಳು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಈ ಯೋಜನೆಗೆ ಬೇಕಾದಷ್ಟು ಜಾಗವಿದ್ದು, ಪುರಾತನ ಜಾಗ ಬಿಟ್ಟು ಬೇರೆ ಕಡೆ ಕಾಮಗಾರಿ ನಡೆಸಬೇಕು. ಬೇರೆ ಜಾಗದಲ್ಲಿ ಕಾಮಗಾರಿ ಕೈಗೊಳ್ಳುವವರೆಗೊ ತಾವು ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದರು.