ಕರ್ನಾಟಕ

karnataka

ETV Bharat / state

ಹಾವೇರಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಸಹಾಯಹಸ್ತ ಚಾಚಿದ ಗೃಹ ಸಚಿವ - Assistance to family members who died from corona

ಶಿಗ್ಗಾಂವಿಯಲ್ಲಿ ತಮ್ಮ ಸ್ವಗೃಹದಲ್ಲಿ ನಿರ್ಮಾಣಗೊಂಡಿರುವ ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ನೀಡಿದ್ದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಕಡೆಯಿಂದ ಐದು ಜನರಿಗೆ ಸಾಂಕೇತಿಕವಾಗಿ 25 ಸಾವಿರ ರೂಪಾಯಿ ಪರಿಹಾರ ಧನ ವಿತರಿಸಿದರು.

assistance-to-family-members-who-died-from-corona-by-basavaraj-bommai
ಕೊರೊನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ ಸಹಾಯ ಹಸ್ತ ಚಾಚಿದ ಗೃಹ ಸಚಿವ

By

Published : Jun 7, 2021, 9:29 PM IST

ಹಾವೇರಿ: ಕೊರೊನಾದಿಂದ ಮೃತಪಟ್ಟ ಕುಟುಂಬಸ್ಥರ ನೆರವಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹಾಯಹಸ್ತ ಚಾಚಿದ್ದು, ತಮ್ಮ ಕ್ಷೇತ್ರದ ಕುಟುಂಬದ ಸದಸ್ಯರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಜಿಲ್ಲೆಯ ಶಿಗ್ಗಾಂವಿ ತಮ್ಮ ಸ್ವಗೃಹದಲ್ಲಿ ನಿರ್ಮಾಣಗೊಂಡಿರುವ ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಕಡೆಯಿಂದ ಐದು ಜನರಿಗೆ ಸಾಂಕೇತಿಕವಾಗಿ 25 ಸಾವಿರ ರೂಪಾಯಿ ಪರಿಹಾರ ಧನ ವಿತರಿಸಿದರು.

ಮೃತರ ಕುಟುಂಬಸ್ಥರಿಗೆ ಗೃಹ ಸಚಿವ ಬಸವರಾಜ್ ಅವರಿಂದ ಧನಸಹಾಯ

ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಕೊರೊನಾದಿಂದ ಸಾವನ್ನಪ್ಪಿದ ಪ್ರತಿ ಕುಟುಂಬಕ್ಕೆ 25 ಸಾವಿರ ರೂಪಾಯಿ ನೀಡುವುದಾಗಿ ಅವರು ತಿಳಿಸಿದರು. ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿದ ಅವರು, ಮುಂಬರುವ ದಿನಗಳಲ್ಲಿ ಕೊರೊನಾ ವಾರಿಯರ್ಸ್‌ಗೆ ಔಷಧಿಯ ಕಿಟ್ ಮತ್ತು ಆಹಾರದ ಕಿಟ್ ವಿತರಿಸುವುದಾಗಿ ತಿಳಿಸಿದರು.

ಅಲ್ಲದೆ ತಮ್ಮ ತಾಯಿ ದಿವಂಗತ ಗಂಗಮ್ಮ ಟ್ರಸ್ಟ್ ವತಿಯಿಂದ ಕೊರೊನಾ ವಾರಿಯರ್ಸ್ ಆರೋಗ್ಯ ವಿಮೆ ಮಾಡಿಸುವುದಾಗಿ ಅವರು ಅಭಯ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್, ಸಂಸದ ಶಿವಕುಮಾರ್ ಉದಾಸಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಓದಿ:ಲಸಿಕೆ ವಿತರಣೆಗೆ ಕೇಂದ್ರೀಕೃತ ವ್ಯವಸ್ಥೆ: ಪ್ರಧಾನಿ ಘೋಷಣೆಗೆ ಮುಖ್ಯಮಂತ್ರಿ ಸ್ವಾಗತ

ABOUT THE AUTHOR

...view details