ಕರ್ನಾಟಕ

karnataka

ETV Bharat / state

ಹಾವೇರಿ: ಸೀಲ್​ಡೌನ್​ ಪ್ರದೇಶಕ್ಕೆ ಬೊಮ್ಮಾಯಿ ಭೇಟಿ, ಪರಿಶೀಲನೆ

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಸೀಲ್​ಡೌನ್​ ಪ್ರದೇಶಕ್ಕೆ ಗೃಹ ಸಚಿವ ಬಸವರಾಜು ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Basavaraj Bommai
ಬಸವರಾಜು ಬೊಮ್ಮಾಯಿ

By

Published : May 9, 2020, 5:25 PM IST

ಹಾವೇರಿ:ಇಬ್ಬರು ಕೊರೊನಾ ಸೋಂಕಿತರು ಪತ್ತೆ ಆಗಿದ್ದರಿಂದ ಸೋಂಕಿತರು ವಾಸವಾಗಿದ್ದ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಸೀಲ್ ಡೌನ್ ಮಾಡಿರೋ ಪ್ರದೇಶಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.

ಸೀಲ್​ಡೌನ್​ ಪ್ರದೇಶಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಸೀಲ್ ಡೌನ್ ಪ್ರದೇಶದಲ್ಲಿ ವಾಸವಾಗಿರೋ ಜನರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಓಡಾಡಬೇಡಿ. ನಿಮಗೆ ಬೇಕಾದ ದಿನಸಿ ವಸ್ತುಗಳು, ತರಕಾರಿ ಮತ್ತು ಹಾಲು ಸೇರಿದಂತೆ ಎಲ್ಲ ವಸ್ತುಗಳನ್ನು ವಿತರಣೆ ಮಾಡುತ್ತೇವೆ. ಈಗಾಗಲೇ ಕೆಲವು ಕಿಟ್​ಗಳನ್ನು ವಿತರಣೆ ಮಾಡಿದ್ದು, ನಿರ್ಬಂಧಿತ ಪ್ರದೇಶದ ಜನರಿಗೆ ಬೇಕಾದ ಇನ್ನಷ್ಟು ಸಾಮಗ್ರಿಗಳನ್ನು ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.

ಪಟ್ಟಣದಲ್ಲಿ ಬಫರ್ ಝೋನ್‌ ರೀತಿಯಲ್ಲಿ ಬಂದೋಬಸ್ತ್ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ.ದೇವರಾಜ, ಎಸಿ ಅನ್ನಪೂರ್ಣ ಮುದಕಮ್ಮನವರ, ಡಿಎಚ್ಓ ಡಾ.ರಾಜೇಂದ್ರ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ABOUT THE AUTHOR

...view details