ಹಾವೇರಿ: ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ದಂಪತಿಯನ್ನು ವಾಣಿಶ್ರೀ (50) ಮತ್ತು ಶಂಕ್ರಪ್ಪ (56) ಎಂದು ಗುರುತಿಸಲಾಗಿದೆ.
ವಾಣಿಶ್ರೀ ಮತ್ತು ಅವರ ಮಗಳು ಕೀರ್ತಿ (21) ಎರಡು ದಿನಗಳ ಹಿಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡ ಇವರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವಾಣಿಶ್ರೀ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ. ಪತ್ನಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಶಂಕ್ರಪ್ಪ ಹೋಲದಲ್ಲಿ ನೇಣಿಗೆ ಶರಣಾಗಿದ್ದಾರೆ.
ಈ ಮಧ್ಯ ಮಗಳು ಕೀರ್ತಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕೀರ್ತಿ ಆರೋಗ್ಯದ ಬಗ್ಗೆ ಮೂರು ದಿನಗಳ ಕಾಲ ಏನು ಹೇಳುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರಂತೆ. ದಂಪತಿ ಸಾವಿಗೆ ಸಾಲಬಾಧೆ ಕಾರಣ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.