ಹಾವೇರಿ :ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ.. ಕೇಂದ್ರ ಸರ್ಕಾರದ ವಿರುದ್ಧ ಕೈ ಪ್ರತಿಭಟನೆ.. - ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕಟ್ಟಿಗೆ ಒಲೆಯಲ್ಲಿ ಚಹಾ ಮಾಡುವ ಮೂಲಕ ಪ್ರತಿಭಟಿಸಿದರು. ಹಾವೇರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರೇಮಾ ಪಾಟೀಲ್ ಸೇರಿ ವಿವಿಧ ಕಾರ್ಯಕರ್ತರು ಪಾಲ್ಗೊಂಡಿದರು.
ನಗರದ ಮೈಲಾರ ಮಹದೇವಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ಜನಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ಖಾಲಿ ಸಿಲಿಂಡರ್ ಪ್ರದರ್ಶಿಸಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಟ್ಟಿಗೆ ಒಲೆಯಲ್ಲಿ ಚಹಾ ಮಾಡುವ ಮೂಲಕ ಪ್ರತಿಭಟಿಸಿದರು. ಹಾವೇರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರೇಮಾ ಪಾಟೀಲ್ ಸೇರಿ ವಿವಿಧ ಕಾರ್ಯಕರ್ತರು ಪಾಲ್ಗೊಂಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೇಮಾ ಪಾಟೀಲ್, ಕೇಂದ್ರ ಸರ್ಕಾರ ಈ ಕೂಡಲೇ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಸುವಂತೆ ಆಗ್ರಹಿಸಿದರು.