ರಾಣೇಬೆನ್ನೂರು :ರಾಜ್ಯ ಸರ್ಕಾರ ಹಸಿರು ವಲಯ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲ ಮಾಡಿರುವ ಹಿನ್ನೆಲೆಯಲ್ಲಿ ರಾಣೇಬೆನ್ನೂರು ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಲಾಕ್‌ಡೌನ್ ಸಡಿಲಿಕೆ.. ರಾಣೇಬೆನ್ನೂರುನಲ್ಲಿ ಹೆಚ್ಚಿದ ವಾಹನ ಸಂಚಾರ ದಟ್ಟಣೆ.. - ಲಾಕ್ ಡೌನ್ ಸಡಿಲಿಕೆ
ಇದರಿಂದ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿವೆ. ಅಲ್ಲದೇ ಪೊಲೀಸರು ಸಹ ಅನಾವಶ್ಯಕ ತಿರುಗಾಟ ನಡೆಸುವ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರ ಕೆಲ ನಿಯಮಗಳನ್ನು ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಕೊಳ್ಳಲು ಮುಂದಾಗಿದ್ದಾರೆ. ಇದರಿಂದ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿವೆ. ಅಲ್ಲದೇ ಪೊಲೀಸರು ಸಹ ಅನಾವಶ್ಯಕ ತಿರುಗಾಟ ನಡೆಸುವ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವಂತೆ ಹೇಳುತ್ತಿದ್ದಾರೆ.
ಲಾಕ್‌ಡೌನ್ ನಡುವೆ ಸಿಮೆಂಟ್ ಅಂಗಡಿ, ಹಾರ್ಡ್‌ವೇರ್ ಅಂಗಡಿ, ಸ್ಟೇಷನರಿ ಅಂಗಡಿ, ಬುಕ್ ಸ್ಟಾಲ್ ತೆರೆದಿವೆ. ಇದರಿಂದ ಸಾರ್ವಜನಿಕರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಜನರು ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಪಾಡಿಕೊಂಡು ವಸ್ತುಗಳನ್ನು ತೆಗೆದುಕೊಳ್ಳುತ್ತಿರುವುದು ಕಂಡು ಬಂದಿತು.