ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ತುಕ್ಕು ಹಿಡಿಯುತ್ತಿರುವ ಇಂದಿರಾ ಕ್ಯಾಂಟೀನ್​ ಕಟ್ಟಡ ಸಾಮಗ್ರಿಗಳು​ - Haveri Indira Canteen

ಹಾವೇರಿ ಜಿಲ್ಲೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಇಂದಿರಾ ಕ್ಯಾಂಟೀನ್ ಕಟ್ಟಡ ಸಾಮಗ್ರಿಗಳು ತುಕ್ಕು ಹಿಡಿಯುತ್ತಿವೆ. ವಸ್ತುಗಳನ್ನ ಹಾಳಾಗದಂತೆ ನೋಡಿಕೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಹಾವೇರಿ  ಇಂದಿರಾ ಕ್ಯಾಂಟೀನ್​ ಕಟ್ಟಡ ಸಾಮಗ್ರಿಗಳು​
ಹಾವೇರಿ ಇಂದಿರಾ ಕ್ಯಾಂಟೀನ್​ ಕಟ್ಟಡ ಸಾಮಗ್ರಿಗಳು​

By

Published : Aug 10, 2020, 8:34 PM IST

ಹಾವೇರಿ: ಅಧಿಕಾರಿಗಳ ನಿರ್ಲಕ್ಷ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಇಂದಿರಾ ಕ್ಯಾಂಟೀನ್ ಕಟ್ಟಡ ಸಾಮಗ್ರಿ ತುಕ್ಕು ಹಿಡಿಯುತ್ತಿವೆ.

ಹಾವೇರಿ ಸೇರಿದಂತೆ ಜಿಲ್ಲೆಯ ಪ್ರತಿ ತಾಲೂಕಿಗೆ ಇಂದಿರಾ ಕ್ಯಾಂಟೀನ್ ಸ್ಥಾಪಿಸಲು ಸರ್ಕಾರ ನಿರ್ಧಾರಿಸಿತ್ತು. ಅದರಂತೆ ಹಾವೇರಿ ಮತ್ತು ರಾಣೆಬೆನ್ನೂರು ನಗರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿವೆ. ಆದರೆ ಸವಣೂರು, ಶಿಗ್ಗಾವಿ, ಹಾನಗಲ್, ಬ್ಯಾಡಗಿ, ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಆರಂಭವಾಗಿಲ್ಲ.

ಕಾಮಗಾರಿ ಆರಂಭವಾಗದ ಹಿನ್ನೆಲೆಯಲ್ಲಿ ಕ್ಯಾಂಟೀನ್ ಬಳಕೆಗೆ ತಂದ ಸ್ಟೀಲ್ ವಸ್ತುಗಳು ಮಳೆಗಾಳಿಗೆ ಹಾಳಾಗಲಾರಂಭಿಸಿವೆ. ಸಂಬಂಧ ಪಟ್ಟ ಅಧಿಕಾರಿಗಳು ಆದಷ್ಟು ಬೇಗ ಇಂದಿರಾ ಕ್ಯಾಂಟೀನ್ ಕಾಮಗಾರಿ ಕೈಗೊಂಡು ತುಕ್ಕು ಹಿಡಿಯುತ್ತಿರುವ ಸ್ಟೀಲ್ ವಸ್ತುಗಳನ್ನ ಹಾಳಾಗದಂತೆ ನೋಡಿಕೊಳ್ಳಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ABOUT THE AUTHOR

...view details