ರಾಣೆಬೆನ್ನೂರು:ತಾಲೂಕಿನ ಚಳಗೇರಿ ಗ್ರಾಮದ ಹೆರಿಗೆ ಆಸ್ಪತ್ರೆಗೆ ಸುಣ್ಣ ಬಣ್ಣ ಹಚ್ಚುವ ಮೂಲಕ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ 'ಈಟಿವಿ ಭಾರತ' ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕುರಿತು "ಸರ್ಕಾರಿ ಹೆರಿಗೆ ಆಸ್ಪತ್ರೆಗೆ ಅರ್ಜೆಂಟಾಗಿ ಬೇಕಿದೆ ಸರ್ಜರಿ" ಎಂಬ ವರದಿ ಪ್ರಸಾರ ಮಾಡಿತ್ತು. ಈ ವರದಿಗೆ ಸ್ಪಂದಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಆಸ್ಪತ್ರೆಗೆ ಸುಣ್ಣ ಬಣ್ಣ ಹಚ್ಚಿ ಮೂಲಭೂತ ಸೌಕರ್ಯ ಒದಗಿಸಿದ್ದಾರೆ.