ಕರ್ನಾಟಕ

karnataka

ETV Bharat / state

ಸಿದ್ದರಾಮೋತ್ಸವ ಅಲ್ಲ, ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತಮಹೋತ್ಸವ : ಸಲೀಂ ಅಹ್ಮದ್ - ಹಾವೇರಿಯಲ್ಲಿ ಸಲೀಂ ಅಹ್ಮದ್ ಹೇಳಿಕೆ

ದಾವಣೆಗೆರೆಯಲ್ಲಿ ಆಚರಿಸುತ್ತಿರುವುದು ಸಿದ್ದರಾಮೋತ್ಸವ ಅಲ್ಲ- ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತಮಹೋತ್ಸವ- ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

it-is-not-siddaramotsava-it-is-siddaramaiahs-75th-amritamahotsava-says-salim-ahmad
ಸಿದ್ದರಾಮೋತ್ಸವ ಅಲ್ಲ, ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅಮೃತಮಹೋತ್ಸವ : ಸಲೀಂ ಅಹ್ಮದ್

By

Published : Jul 17, 2022, 9:45 PM IST

ಹಾವೇರಿ : ಆಗಸ್ಟ್ 3 ರಂದು ಆಚರಿಸುತ್ತಿರುವುದು ಸಿದ್ದರಾಮೋತ್ಸವ ಅಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇದು ನಮ್ಮ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅಮೃತ ಮಹೋತ್ಸವದ ಆಚರಣೆ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮೋತ್ಸವ ಅಲ್ಲ, ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅಮೃತಮಹೋತ್ಸವ : ಸಲೀಂ ಅಹ್ಮದ್

ಈ ಅಮೃತ ಮಹೋತ್ಸವಕ್ಕೆ ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಆಗಮಿಸಲಿದ್ದು, ಕಾರ್ಯಕ್ರಮದಲ್ಲಿ ಪಕ್ಷದ ಎಲ್ಲ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ 40 ವರ್ಷದ ರಾಜಕೀಯ ಜೀವನ ಮತ್ತು ಅವರು ಸಿಎಂ ಆಗಿದ್ದ ವೇಳೆ ರಾಜ್ಯದ ಜನತೆಗೆ ನೀಡಿದ ಕಾರ್ಯಕ್ರಮಗಳ ಬಗ್ಗೆ ಪ್ರದರ್ಶನ ಮಾಡಲಾಗುವುದು ಎಂದು ಸಲೀಂ ಅಹ್ಮದ್ ತಿಳಿಸಿದರು.

ಈ ಕಾರ್ಯಕ್ರಮದಿಂದ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬರುತ್ತಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಐದು ವರ್ಷಗಳ ಕಾಲ ಉತ್ತಮ ಆಡಳಿತ ನೀಡಿದ್ದಾರೆ. ಯಾವುದೇ ಹಗರಣವಿಲ್ಲದೆ ಒಳ್ಳೆಯ ಆಡಳಿತವನ್ನು ನೀಡಿದ್ದು, ಈ ಕುರಿತಂತೆ ಕಾರ್ಯಕ್ರಮದಲ್ಲಿ ಚರ್ಚೆ ಮಾಡುತ್ತೇವೆ ಎಂದರು. ಈ ಕಾರ್ಯಕ್ರಮಕ್ಕೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಇದೇ ವೇಳೆ ಹೇಳಿದರು.

ಆಗಸ್ಟ್ 15 ರಂದು ಐತಿಹಾಸಿಕ ಸಮಾವೇಶ : ಆಗಸ್ಟ್ 15 ರಂದು ಬೆಂಗಳೂರಲ್ಲಿ ಐತಿಹಾಸಿಕ ಸಮಾವೇಶ ಆಯೋಜಿಸಲಾಗಿದೆ. ಆ ದಿನ ಒಂದು ಲಕ್ಷ ಜನರು ರಾಷ್ಟ್ರಧ್ವಜ ಹಿಡಿದುಕೊಂಡು ಪಾದಯಾತ್ರೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಲೀಂ ಅಹ್ಮದ್ ತಿಳಿಸಿದರು. ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಇದೇ ರೀತಿ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾಹಿತಿ ನೀಡಿದರು.

ಭಾರತ ಜೋಡೋ ಪಾದಯಾತ್ರೆ: ಸರ್ಕಾರಿ ಸ್ವಾಯುತ್ತದ ಸಂಸ್ಥೆಗಳಾದ ಇ.ಡಿ ಸೇರಿದಂತೆ ಹಲವು ಸಂಸ್ಥೆಗಳನ್ನು ಬಿಜೆಪಿ ತಮ್ಮ ಪಕ್ಷದ ಮುಂಚೂಣಿ ಘಟಕಗಳನ್ನಾಗಿ ಮಾಡಿಕೊಂಡಿದೆ. ರಾಹುಲ್ ಗಾಂಧಿಯವರನ್ನು ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಸಿಲುಕಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಸಲೀಂ ಆರೋಪಿಸಿದರು. ಕಾಂಗ್ರೆಸ್ ಪಕ್ಷ ಯಾವುದಕ್ಕೂ ಹೆದರುವುದಿಲ್ಲ. ಆಕ್ಟೋಬರ್ ಎರಡರಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನೇತೃತ್ವದಲ್ಲಿ ಭಾರತ ಜೋಡೋ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುವುದಾಗಿ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಓದಿ :2023ರ ಚುನಾವಣೆಯೇ ನನ್ನ ಕೊನೆಯ ಸ್ಪರ್ಧೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ : ಸಿದ್ದರಾಮಯ್ಯ

For All Latest Updates

TAGGED:

ABOUT THE AUTHOR

...view details