ಕರ್ನಾಟಕ

karnataka

ETV Bharat / state

ಖಾಸಗಿ ವಾಹಿನಿ ಮುಖ್ಯಸ್ಥರಿಗೆ ಬೆದರಿಕೆ ಆರೋಪ: ಸೂಕ್ತ ಕ್ರಮಕ್ಕೆ ಮನವಿ - ಜೈ ಭೀಮ್ ಜನಪದ ಕಲಾಸಂಘ

ಹಾನಗಲ್ ತಾಲೂಕಿನ ಅಕ್ಕಿಆಲೂರ ಗ್ರಾಮದ ಮಾರುತಿ ದೇವಸ್ಥಾನದ ಮುಂಭಾಗದಲ್ಲಿ ಡಾ. ಅಂಬೇಡ್ಕರ್ ಧಾರಾವಾಹಿಯ ಪಾತ್ರಧಾರಿಗಳ ಭಾವಚಿತ್ರದ ಕಟೌಟ್ ನಿಲ್ಲಿಸಿ ಪೂಜೆ ಸಲ್ಲಿಸಲಾಯಿತು.

ಜೈ ಭೀಮ್ ಜನಪದ ಕಲಾಸಂಘ
ಜೈ ಭೀಮ್ ಜನಪದ ಕಲಾಸಂಘ

By

Published : Sep 7, 2020, 1:37 PM IST

ಹಾನಗಲ್: ಖಾಸಗಿ ವಾಹಿನಿ ಮುಖ್ಯಸ್ಥರಿಗೆ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೈ ಭೀಮ್ ಜನಪದ ಕಲಾ ಸಂಘದ ಕಾರ್ಯಕರ್ತರು ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜೀವನ ಚರಿತ್ರೆಯ ಕುರಿತು ಇತ್ತೀಚೆಗೆ ಖಾಸಗಿ ವಾಹಿನಿಯಲ್ಲಿ ಧಾರಾವಾಹಿ ಪ್ರಸಾರವಾಗುತ್ತಿದೆ. ಈ ಖಾಸಗಿ ವಾಹಿನಿಯ ಮುಖ್ಯಸ್ಥರಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ.

ಹೀಗಾಗಿ ಹಾನಗಲ್ ತಾಲೂಕಿನ ಅಕ್ಕಿಆಲೂರ ಗ್ರಾಮದ ಮಾರುತಿ ದೇವಸ್ಥಾನದ ಮುಂಭಾಗದಲ್ಲಿ ಡಾ. ಅಂಬೇಡ್ಕರ್ ಪಾತ್ರಧಾರಿಗಳ ಭಾವಚಿತ್ರದ ಕಟೌಟ್ ನಿಲ್ಲಿಸಿ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕರ್ತರು ಉಪ ತಹಶೀಲ್ದಾರ್​​​ಗೆ ಮನವಿ ಸಲ್ಲಿಸಿದರು.

ಈ ವೇಳೆ ಉಪ ತಹಶೀಲ್ದಾರ್ ಬಿ.ಎಲ್.ಪೂಜಾರ, ಪ್ರಕಾಶಗೌಡ ಪಾಟೀಲ, ಮೆಹಬೂಬಲಿ ಬ್ಯಾಡಗಿ, ಮಂಜುನಾಥ ಕರ್ಜಿಗಿ, ಕಿರಣ ಹೂಗಾರ ಮುಂತಾದವರಿದ್ದರು.

ABOUT THE AUTHOR

...view details