ಕರ್ನಾಟಕ

karnataka

ETV Bharat / state

ಹಾವೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ: ವಿದ್ಯಾರ್ಥಿಗಳಿಂದ ಜಾಥಾ

ಕಾರ್ಗಿಲ್ ವಿಜಯೋತ್ಸವದ 20 ನೇ ವರ್ಷಾಚರಣೆಯನ್ನು ಆಚರಿಸಲಾಯಿತು. ಮಾಸೂರಿನ ಶ್ರೀವಿವೇಕಾನಂದ ವಿದ್ಯಾಲಯದ ಮಕ್ಕಳು ತಿರಂಗ ಹಿಡಿದು ಪ್ರಭಾತಬೇರಿ ನಡೆಸಿದರು.

kargil

By

Published : Jul 27, 2019, 6:35 AM IST

ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರಿನಲ್ಲಿ ಕಾರ್ಗಿಲ್ ವಿಜಯೋತ್ಸವದ 20ನೇ ವರ್ಷಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಮಾಸೂರಿನ ಶ್ರೀವಿವೇಕಾನಂದ ವಿದ್ಯಾಲಯದ ಮಕ್ಕಳು ತಿರಂಗ ಹಿಡಿದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.

ತಿರಂಗ ಹಿಡಿದು ವಿದ್ಯಾರ್ಥಿಗಳ ಸಂಭ್ರಮಾಚರಣೆ

ಜಾಥಾ ಉದ್ದಕ್ಕೂ ಸೈನಿಕರಿಗೆ ಜಯಘೋಷ ಕೂಗಿದರು. ನಂತರ ಬಸ್‌ ನಿಲ್ದಾಣದ ವೃತ್ತದಲ್ಲಿ ಜಮಾಯಿಸಿ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ವಿದ್ಯಾರ್ಥಿಗಳು ಸೈನಿಕರಿಗೆ ಗೌರವ ವಂದನೆ ಸಲ್ಲಿಸಿದರು.

ವಿವೇಕಾನಂದ ವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಸೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.

ABOUT THE AUTHOR

...view details