ಕರ್ನಾಟಕ

karnataka

ETV Bharat / state

ರಾಣೆಬೆನ್ನೂರಿನಿಂದ ಕೋಳಿವಾಡಗೆ ಕಾಂಗ್ರೆಸ್​ ಟಿಕೆಟ್​ ಫಿಕ್ಸ್​​?

ಬದಲಾದ ರಾಜಕೀಯ ವಿದ್ಯಮಾನದಲ್ಲಿ ಮಾಜಿ ವಿಧಾಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಪ ಚುನಾವಣಾ ಅಖಾಡಕ್ಕಿಳಿಯುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆ.ಬಿ.ಕೋಳಿವಾಡ

By

Published : Sep 26, 2019, 10:33 AM IST

ರಾಣೆಬೆನ್ನೂರು: ಅನರ್ಹ ಶಾಸಕರಿಂದ ತೆರವಾಗಿರುವ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಇತ್ತ, ರಾಣೆಬೆನ್ನೂರು ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರಿಗೆ ಟಿಕೆಟ್ ಬಹುತೇಕ ಖಚಿತ ಎಂದು ತಿಳಿದುಬಂದಿದೆ.

ಉಪ ಕದನದಲ್ಲಿ ಮತ್ತೊಂದು ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಕೋಳಿವಾಡ ಅವರು ಈ ಬಾರಿ ಗೆಲುವಿಗೆ ಪಣ ತೊಟ್ಟಿದ್ದಾರೆ. ಹಾಗಾಗಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಒಟ್ಟುಗೂಡಿಸಿ ಚುನಾವಣೆ ಪ್ರಚಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆರ್. ಶಂಕರ್ ವಿರುದ್ಧ ಅಲ್ಪ ಮತಗಳಿಂದ ಕೋಳಿವಾಡ​ ಸೋಲೊಪ್ಪಿಕೊಂಡಿದ್ದರು. ಇದನ್ನೇ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಅವರು ಈಗ ಉಪಚುನಾವಣೆ ಜಿದ್ದಿಗೆ ಬಿದ್ದಿದ್ದಾರೆ ಎಂಬುದು ಕ್ಷೇತ್ರದ ಮತದಾರರ ಮಾತಾಗಿದೆ.

ಸೋಮವಾರ ನಾಮಪತ್ರ ಸಲ್ಲಿಕೆ: ಕೆ.ಬಿ. ಕೋಳಿವಾಡ ಅವರು ಈ ಬಾರಿ ತಮ್ಮ ಪುತ್ರ ಪ್ರಕಾಶ್​ ಕೋಳಿವಾಡ ಅವರನ್ನು ಉಪ ಚುನಾವಣೆಯ ಕಣಕ್ಕಿಳಿಸುತ್ತಾರೆ ಎಂಬುದು ಕ್ಷೇತ್ರದ ಜನರ ನಿರೀಕ್ಷೆಯಾಗಿತ್ತು. ಆದ್ರೆ ಬದಲಾದ ರಾಜಕೀಯ ವಿದ್ಯಮಾನಗಳ ನಡುವೆ ಕೆ.ಬಿ. ಕೋಳಿವಾಡ ಅವರೇ ಮತ್ತೆ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಬೃಹತ್ ಜನಸಮೂಹದ ಮೂಲಕ ಬಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್​ ಮುಖಂಡರೊಬ್ಬರು ತಿಳಿಸಿದ್ದಾರೆ.

ABOUT THE AUTHOR

...view details