ಹಾವೇರಿ:ಸಿಎಂ ಬಸವರಾಜ ಬೊಮ್ಮಾಯಿ ಅವರು ಒಂದೇ ಸಮಾಜದ ಸಿಎಂ ಅಲ್ಲ. ಎಲ್ಲ ಜನಾಂಗದವರ ಮುಖ್ಯಮಂತ್ರಿ. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಹಾಳು ಮಾಡಲು ಬಿಡಬೇಡಿ ಎಂದು ಕಾಂಗ್ರೆಸ್ ಮುಖಂಡ ಸಲೀಂ ಅಹ್ಮದ್ ಹೇಳಿದರು. ಸಮಾಜ ಒಡೆಯುವ ಸಂಘಟನೆಗಳನ್ನು ನಿಷೇಧಿಸಿ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಇಂತಹ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಅವರು ಆಗ್ರಹಿಸಿದರು.
ರಾಹುಲ್ ಗಾಂಧಿ ರಾಜ್ಯ ಪ್ರವಾಸ:ನಾಳೆಯಿಂದ ಎರಡು ದಿನಗಳ ಕಾಲ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಮಂಗಳವಾರ ಮಧ್ಯಾಹ್ನ 2.30 ಗಂಟೆಗೆ ಅವರು ಹುಬ್ಬಳ್ಳಿಗೆ ಆಗಮಿಸುತ್ತಾರೆ. ರಾತ್ರಿ 8 ಗಂಟೆಗೆ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ನ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.