ಹಾವೇರಿ:ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗೋದಿಲ್ಲ ಅಂದ್ರು. ಅವರನ್ನೆ ಕರೆದುಕೊಂಡು ಬಂದು ಸಿಎಂ ಸ್ಥಾನದಲ್ಲಿ ಕೂರಿಸೋ ಹಣೆಬರಹ ಸಿದ್ದರಾಮಯ್ಯಗೆ ಬಂತು. ಯಡಿಯೂರಪ್ಪ ಸಿಎಂ ಆಗೋದಿಲ್ಲ ಅಂದ್ರು. ಈಗ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯ ಆಗೋದಿಲ್ಲ ಅಂದಿದ್ದೆಲ್ಲ ಆಗುತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಅರಳೀಕಟ್ಟಿ ಗ್ರಾಮದಲ್ಲಿ ಮಾತನಾಡಿರುವ ಅವರು, ಹಿರೇಕೆರೂರಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಸೋಲುತ್ತಾರೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಬಿ.ಸಿ.ಪಾಟೀಲ್ ಮೂವತ್ತರಿಂದ ಮೂವತ್ತೈದು ಸಾವಿರ ಲೀಡ್ನಲ್ಲಿ ಗೆಲ್ಲುತ್ತಾರೆ, ಬೇಕಾದ್ರೆ ನನ್ನ ಮಾತನ್ನು ಬರೆದಿಟ್ಟುಕೊಳ್ಳಿ ಎಂದರು.