ರಾಣೆಬೆನ್ನೂರು (ಹಾವೇರಿ): ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ (ಕೊಡಿಯಾಲ) ಗ್ರಾಮದಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ನೌಕರ ನೇಣಿಗೆ ಶರಣು - KSRTC employee
ಹಾವೇರಿಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ನೌಕರ ನೇಣುಹಾಕಿಕೊಂಡು ಆತ್ಮಹತ್ಯೆ
ಹಿರೆಕೇರೂರು ತಾಲೂಕಿನ ತಿಪ್ಪಾಯಿಕೊಪ್ಪದ ಲತೀಪ್ ಮಹ್ಮದ್ ಹನೀಪಸಾಬ್ ಉಡಗಣಿ (36) ಆತ್ಮಹತ್ಯೆ ಮಾಡಿಕೊಂಡ ನೌಕರ. ರಾಣೆಬೆನ್ನೂರು ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಮುಂಜಾನೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಕುಮಾರಪಟ್ಟಣಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.