ಹಾವೇರಿ:ಬಿಜೆಪಿ ಮುಖಂಡನ ಮನೆಯಲ್ಲಿ ಕಾರ್ಮಿಕರಿಗೆ ಮೀಸಲಿಟ್ಟ ಕಿಟ್ಗಳು ಪತ್ತೆಯಾಗಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಿನ್ನೆ ರಾತ್ರಿ ಹಾನಗಲ್ ಪಟ್ಟಣದ ಬಿಜೆಪಿ ಮುಖಂಡ ಕಲ್ಯಾಣ ಕುಮಾರ ಶೆಟ್ಟರ ಎಂಬುವರಿಗೆ ಸೇರಿದ್ದ ಮನೆಯಲ್ಲಿ ಕಾರ್ಮಿಕರಿಗೆ ವಿತರಿಸಬೇಕಿದ್ದ ಕಿಟ್ಗಳು ಪತ್ತೆಯಾಗಿದ್ದವು.
ಜಿಲ್ಲಾಧಿಕಾರಿ ಕಚೇರಿ ಮುಂದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಕಾರ್ಮಿಕ ಇಲಾಖೆ ಹೆಸರಿನಲ್ಲಿ ಸ್ಟಿಕ್ಕರ್ ಅಂಟಿಸಿದ್ದ ನೂರಾರು ಕಿಟ್ಗಳು ಬಿಜೆಪಿ ಮುಖಂಡನ ಮನೆಯಲ್ಲಿ ಪತ್ತೆ ಆಗಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಕಾರ್ಮಿಕರಿಗೆ ವಿತರಿಸಲು ಸರ್ಕಾರ ನೀಡಿದ್ದ ಕಿಟ್ಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗೆ ಸೇರಿದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.