ಕರ್ನಾಟಕ

karnataka

ETV Bharat / state

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ.. ಸಿಎಂ ಬೊಮ್ಮಾಯಿ ತವರಿನಲ್ಲಿ ರೋಗಿಗಳ ಪರದಾಟ

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿದ್ದು, ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಒಟ್ಟು 800 ಆರೋಗ್ಯ ಸಿಬ್ಬಂದಿಗಳ ಕೊರತೆ ಇದೆ ಎಂದು ಹೇಳಲಾಗಿದೆ.

lack-of-staff-in-district-hospital-haveri
ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ.. ರೋಗಿಗಳ ಪರದಾಟ

By

Published : Sep 4, 2022, 10:43 PM IST

ಹಾವೇರಿ : ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಿಡಿದು ಜಿಲ್ಲಾಸ್ಪತ್ರೆಯವರೆಗೂ ರೋಗಿಗಳು ಸರತಿಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಸಾಮಾನ್ಯವಾಗಿದೆ. ಇದರಿಂದಾಗಿ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಹಾವೇರಿ ಜಿಲ್ಲಾಸ್ಪತ್ರೆ ಹಾಗೂ ಮಕ್ಕಳ ಮತ್ತು ಹೆರಿಗೆ ಆಸ್ಪತ್ರೆಯೂ ಹೊರತಾಗಿಲ್ಲ.

ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿ ಇಲ್ಲದ ಕಾರಣ ಬಡರೋಗಿಗಳು ದಿನಪೂರ್ತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಐದು ನೂರಕ್ಕೂ ಅಧಿಕ ರೋಗಿಗಳು ಜಿಲ್ಲಾಸ್ಪತ್ರೆಗೆ ಹೋರರೋಗಿಗಳಾಗಿ ಆಗಮಿಸುತ್ತಾರೆ.ಇವರು ವೈದ್ಯರ ಭೇಟಿಗೆ ಗಂಟೆಗಟ್ಟಲೆ ಸರತಿಯಲ್ಲಿ ನಿಲ್ಲುವ ಅನಿವಾರ್ಯತೆ ಇದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ.. ರೋಗಿಗಳ ಪರದಾಟ

ಜಿಲ್ಲೆಯ ಒಟ್ಟು 13 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲ. ಜೊತೆಗೆ ತಾಲೂಕು ಆಸ್ಪತ್ರೆ ಸೇರಿ ಜಿಲ್ಲೆಯಲ್ಲಿ ಚಿಕಿತ್ಸೆಗೆ 21 ತಜ್ಞವೈದ್ಯರ ಲಭ್ಯತೆ ಇಲ್ಲ. ಜಿಲ್ಲೆಯಲ್ಲಿ 30 ಫಾರ್ಮಾಸಿಸ್ಟ್, 42 ಲ್ಯಾಬ್ ಟೆಕ್ನಿಷಿಯನ್​ಗಳ ಕೊರತೆ ಇದೆ. ಅಲ್ಲದೆ 96 ಎಎನ್ಎಂ, 96 ಜ್ಯೂನಿಯರ್ ಹೆಲ್ತ್ ಇನ್ಸಫೆಕ್ಟರ್, 2 ಪ್ರೋಗ್ರಾಮಿಂಗ್ ಆಫೀಸರ್ ಕೊರತೆ ಇದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲೇ ಸುಮಾರು 800 ಸಿಬ್ಬಂದಿಗಳ ಕೊರತೆ ಇದೆ ಎಂದು ಹೇಳಲಾಗ್ತಿದೆ. ಸಿಎಂ ಬೊಮ್ಮಾಯಿ ಪ್ರತಿನಿಧಿಸುವ ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಉಳಿದ ಜಿಲ್ಲೆಗಳ ಗತಿಯೇನು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ :ಬಿಬಿಎಂಪಿ ಕಸದ ಲಾರಿಗೆ ಯುವಕ ಬಲಿ.. ಮೃತನ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ

ABOUT THE AUTHOR

...view details