ಕರ್ನಾಟಕ

karnataka

ETV Bharat / state

ರಾಣೆಬೆನ್ನೂರು ಬಳಿ ಲಾರಿ-ಕಾರು ಡಿಕ್ಕಿ.. ಇಬ್ಬರು ರಂಗಭೂಮಿ ಕಲಾವಿದೆಯರು ಸಾವು - lorry and car accident in haveri

ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ದಾವಣಗೆರೆ ಮೂಲದ ಗೀತಾ (34) ಮತ್ತು ಮಂಜುಳಾ (36) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

larry-car-collision-death-of-two-artists
ಲಾರಿ-ಕಾರು ಡಿಕ್ಕಿ : ಇಬ್ಬರು ರಂಗಭೂಮಿ ಕಲಾವಿದೆಯರು ಸಾವು

By

Published : Mar 27, 2022, 8:56 PM IST

ಹಾವೇರಿ : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಗೀತಾ ದಾವಣಗೆರೆ (34) ಮತ್ತು ಮಂಜುಳಾ (36) ಎಂದು ಗುರುತಿಸಲಾಗಿದೆ. ಮೃತರು ದಾವಣಗೆರೆ ಮೂಲದವರು ಎಂದು ತಿಳಿದುಬಂದಿದೆ. ಲಾರಿಯನ್ನು ಓವರ್ ಟೇಕ್ ಮಾಡಲು ಹೋದಾಗ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.

ದಾವಣಗೆರೆಯಿಂದ ಕಾರವಾರಕ್ಕೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಣೆಬೆನ್ನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ :ಮಂಡ್ಯ ತಹಶೀಲ್ದಾರ್ ಅಮಾನತು : ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು

ABOUT THE AUTHOR

...view details