ಕರ್ನಾಟಕ

karnataka

ETV Bharat / state

ಮೂತ್ರಪಿಂಡ ವೈಫಲ್ಯದ ರೋಗಿಗಳಿಗೆ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ - patients with kidney failure

ಮೂತ್ರಪಿಂಡ ವೈಫಲ್ಯ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ನೋವುಗಳನ್ನು ಅನುಭವಿಸುವ ಬದಲು ದಯಾಮರಣ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತಿದ್ದೇವೆ ಎಂದು ನಾಗರಾಜ ಬಾದಮಿ ತಿಳಿಸಿದರು.

ದಯಾಮರಣ ಕೋರಿ ರಾಷ್ರಪತಿಗಳಿಗೆ ಪತ್ರ
ದಯಾಮರಣ ಕೋರಿ ರಾಷ್ರಪತಿಗಳಿಗೆ ಪತ್ರ

By

Published : Aug 28, 2020, 5:49 PM IST

Updated : Aug 28, 2020, 7:36 PM IST

ರಾಣೆಬೆನ್ನೂರು:ಸೂಕ್ತವಾಗಿ ಡಯಾಲಿಸಿಸ್ ಚಿಕಿತ್ಸೆ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ದಯಾ ಮರಣ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಸುಮಾರು 10 ರೋಗಿಗಳು ತಹಶೀಲ್ದಾರ್​ ಮೂಲಕ ‌ರಾಷ್ಟ್ರಪತಿಗಳಿಗೆ ಪತ್ರ ಸಲ್ಲಿಸಿದ್ದಾರೆ.

ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ನಾಗರಾಜ ಬಾದಮಿ ಮಾತನಾಡಿ, ರಾಣೆಬೆನ್ನೂರು ನಗರದಲ್ಲಿ ಸುಮಾರು ನೂರು ಹಾಸಿಗೆ ಹೊಂದಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇವಲ‌ ಒಂದು ಡಯಾಲಿಸಿಸ್ ಘಟಕ ಇದೆ. ಇದರಲ್ಲಿ ತಾಲೂಕು ಸೇರಿದಂತೆ ಬ್ಯಾಡಗಿ, ಹಿರೆಕೇರೂರು ರೋಗಿಗಳು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕೊರೊನಾ ಹಿನ್ನೆಲೆ ಆಸ್ಪತ್ರೆ ಸಿಬ್ಬಂದಿಗಳು ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್ ಮಾಡಲು ಹಿಂದೇಟು ಹಾಕಿದ್ದು, ಘಟಕವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಹೇಳಿದರು.

ಇದರಿಂದ ಮೂತ್ರಪಿಂಡ ವೈಫಲ್ಯ ರೋಗಿಗಳಿಗೆ ತೀವ್ರ ತೊಂದರೆಯಾಗಿದ್ದು, ಚಿಕಿತ್ಸೆಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಇಂತಹ ನೋವುಗಳನ್ನು ಅನುಭವಿಸುವ ಬದಲು ದಯಾಮರಣ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತಿದ್ದೇವೆ ಎಂದರು.

Last Updated : Aug 28, 2020, 7:36 PM IST

ABOUT THE AUTHOR

...view details