ಹಾವೇರಿ:ಎರಡು ದಶಕಗಳ ಬೇಡಿಕೆಯಾಗಿದ್ದ ವೈದ್ಯಕೀಯ ಕಾಲೇಜಿನ ಕನಸು ಇದೀಗ ಸಾಕಾರಗೊಳ್ಳುತ್ತಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ನಡೆಯುತ್ತಿದೆ.
ಸಾಕಾರದ ಹಾದಿಯಲ್ಲಿ ಹಾವೇರಿಯ ದಶಕಗಳ ಕನಸು - ಹಾವೇರಿ ಮೆಡಿಕಲ್ ಕಾಲೇಜ್ ಕಚೇರಿ
ಎರಡು ದಶಕಗಳ ಬೇಡಿಕೆಯಾಗಿದ್ದ ವೈದ್ಯಕೀಯ ಕಾಲೇಜಿನ ಕನಸು ಇದೀಗ ಸಾಕಾರಗೊಳ್ಳುತ್ತಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ನಡೆಯುತ್ತಿದೆ.
ಸಾಕಾರಗೊಂಡ ಹಾವೇರಿಯ ದಶಕಗಳ ಕನಸು
ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣೀಕ ವರ್ಷಕ್ಕಾಗಿ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ತಾತ್ಕಾಲಿಕವಾಗಿ ಮೆಡಿಕಲ್ ಕಾಲೇಜ್ ಕಚೇರಿಯನ್ನು ಆರಂಭಿಸಲಾಯಿತು.
ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾವೇರಿ ಶಾಸಕ ನೆಹರು ಓಲೇಕಾರ್ ಪೂಜೆ ಸಲ್ಲಿಸುವ ಮೂಲಕ ಕಚೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.