ರಾಣೆಬೆನ್ನೂರು: ರಾಷ್ಟ್ರೀಯ ಹೆದ್ದಾರಿ-4ರ ಮೇಲ್ಸೇತುವೆಯಿಂದ ಲಾರಿ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ನಗರದ ಎರೆಕುಪ್ಪಿ ಮುಖ್ಯ ರಸ್ತೆ ಹತ್ತಿರ ನಡೆದಿದೆ.
ಮೇಲ್ಸೇತುವೆಯಿಂದ ಲಾರಿ ಬಿದ್ದು ಚಾಲಕ ಸಾವು - ರಾಣೆಬೆನ್ನೂರು ಲಾರಿ ಅಪಘಾತ ನ್ಯೂಸ್
ಹುಬ್ಬಳ್ಳಿಯಿಂದ ಬೆಂಗಳೂರಿಗೆ ಸರಕು ತುಂಬಿಕೊಂಡು ಹೋಗುತ್ತಿದ್ದಾಗ ಚಾಲಕನ ಅಜಾಗರೂಕತೆಯಿಂದ ಲಾರಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದಿದ್ದು, ಚಾಲಕ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ.

Accident
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅರಳಿಕಟ್ಟಿ ಗ್ರಾಮದ ಸತೀಶ ಗಂಗಾಧರ ಹುಂಬಿ (26) ಮೃತ ಚಾಲಕ. ಕಳೆದ ರಾತ್ರಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಸರಕು ತುಂಬಿಕೊಂಡು ಹೋಗುತ್ತಿದ್ದಾಗ ಚಾಲಕನ ಅಜಾಗರೂಕತೆಯಿಂದ ಲಾರಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದಿದೆ. ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದಾನೆ.
ಈ ಸಂಬಂಧ ರಾಣೆಬೆನ್ನೂರು ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.