ಹಾವೇರಿ:ತಾಲೂಕಿನ ನಾಗನೂರು ಗ್ರಾಮದ ಬಳಿಯ ಹೊಲದಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿದ್ಯಾಶ್ರೀ ಗಾಳಿ (22 ವರ್ಷ) ಮತ್ತು ಇರ್ಷಾದ್ ಕುಡಚಿ (23 ವರ್ಷ) ಮೃತ ಪ್ರೇಮಿಗಳು ಎಂಬುದು ತಿಳಿದುಬಂದಿದೆ. ಏಪ್ರಿಲ್ 24 ರಂದು ಬೆಳಗಿನ ಜಾವ ಮನೆಯಿಂದ ವಿದ್ಯಾಶ್ರೀ ನಾಪತ್ತೆಯಾಗಿದ್ದಳು. ಈ ಸಂಬಂಧ ತಾಲೂಕಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳ ಮೃತದೇಹ ಪತ್ತೆ ಕಳೆದ ಕೆಲವು ದಿನಗಳ ಹಿಂದಷ್ಟೇ ಬೇರೊಬ್ಬ ಯುವಕನ ಜೊತೆ ವಿದ್ಯಾಶ್ರೀಗೆ ನಿಶ್ಚಿತಾರ್ಥ ಆಗಿತ್ತು. ಇದೀಗ ಯುವಕ ಇರ್ಷಾದ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲೇ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಸಿಪಿಐ ನಾಗಮ್ಮ, ಮಹಿಳಾ ಠಾಣೆ ಸಿಪಿಐ ಚಿದಾನಂದ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓದಿ:'ಟೀಕಾ ಉತ್ಸವ್ ಬಾಯಿ ಬಡಾಯಿ ಬಿಟ್ಟಾಕಿ, ಮೊದಲು ಎಲ್ಲರಿಗೂ ಉಚಿತ ಲಸಿಕೆ ನೀಡಿ'