ರಾಣೆಬೆನ್ನೂರು:ನಗರದಲ್ಲಿ ಹಾದು ಹೋಗಿರುವ ಬಾಗಲಕೋಟೆ- ಬಿಳಿಗಿರಿರಂಗನಬೆಟ್ಟ ರಾಜ್ಯ ಹೆದ್ದಾರಿಯಲ್ಲಿ, ಗೇಟ್ ನಂ-219ರಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ವಿವಿಧ ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರೈಲ್ವೆ ಮೇಲ್ಸೇತುವೆಗಾಗಿ ರಾಣೆನ್ನೂರಲ್ಲಿ ಬೃಹತ್ ಪ್ರತಿಭಟನೆ - protest in Ranbennur the railway bridgeೠ
ರಾಣೆಬೆನ್ನೂರಿನ ಬಾಗಲಕೋಟೆ- ಬಿಳಿಗಿರಿರಂಗನಬೆಟ್ಟ ರಾಜ್ಯ ಹೆದ್ದಾರಿಯಲ್ಲಿ, ಗೇಟ್ ನಂ-219ರಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ವಿವಿಧ ರೈತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಳೆದ ಎರಡು ವರ್ಷಗಳ ಹಿಂದೆ ಈ ಮಾರ್ಗದಲ್ಲಿ ರೈಲ್ವೆ ಇಲಾಖೆ ಕೆಳಸೇತುವೆ ಮಾಡಿತ್ತು. ಇದು ಅವೈಜ್ಞಾನಿಕವಾಗಿದ್ದು, ಮಳೆಗಾಲದಲ್ಲಿ ನೀರು ನಿಂತು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಸಂಬಂಧ ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸಿದರೂ ರೈಲ್ವೆ ಇಲಾಖೆ ಗಮನಹರಿಸಿಲ್ಲ. ಹೀಗಾಗಿ ಇಂದು ಬೃಹತ್ ಪ್ರತಿಭಟನೆ ಹಾಗೂ ರೈಲು ರೋಕೋ ಚಳವಳಿ ಹಮ್ಮಿಕೊಂಡು ಪ್ರತಿಭಟನೆ ನಡೆಸಲಾಯಿತು.
ರೈಲು ರೋಕೋ ಹಮ್ಮಿಕೊಂಡ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂಬ ಉದ್ದೇಶದಿಂದ ರೈಲ್ವೆ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ ರೈಲ್ವೆ ಹಳಿ ಮೇಲೆ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ರೈತ ಮುಖಂಡರು ರೈಲ್ವೆ ಹಳಿಯತ್ತ ಹೋಗಲು ಮುಂದಾದರು. ಈ ವೇಳೆ ಪೊಲೀಸರು ತಡೆದ ಹಿನ್ನೆಲೆ ಮಾತಿನ ಚಕಮಕಿ ನಡೆಯಿತು.