ರಾಣೆಬೆನ್ನೂರು: ಹಾವೇರಿ ಜಿಲ್ಲೆಯಲ್ಲಿ ಮತ್ತು ರಾಣೆಬೆನ್ನೂರು ತಾಲೂಕಿನಾದ್ಯಂತ ಮಟ್ಕಾ ಹಾವಳಿ ಜೋರಾಗಿದೆ. ಇದಕ್ಕೆ ಶಾಸಕರು ಮತ್ತು ಅವರ ಆಪ್ತರು ಕೈ ಜೋಡಿಸಿದ್ದಾರೆ ಎಂದು ನಗರಸಭಾ ಸದಸ್ಯ ನಿಂಗರಾಜ ಕೋಡಿಹಳ್ಳಿ ಆರೋಪ ಮಾಡಿದ್ದಾರೆ.
ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ರಾಣೆಬೆನ್ನೂರು ನಗರದಲ್ಲಿ ಹೊರ ಜಿಲ್ಲೆಯಿಂದ ಮಟ್ಕಾ ಬಿಡ್ಡರ್ಗಳು ಬಂದು ಓಸಿ ದಂಧೆಯಲ್ಲಿ ನಿರತರಾಗಿದ್ದಾರೆ. ಇವರಿಗೆ ಶಾಸಕರು ಹಾಗೂ ಆಪ್ತರು ಸಹಕರಿಸುತ್ತಿದ್ದಾರೆ ಎಂದು ಜನರು ಮಾತನಾಡುತ್ತಿದ್ದಾರೆ. ಕೊರೊನಾ ನಿರ್ವಹಣೆ ನಡುವೆ ರಾಣೆಬೆನ್ನೂರು ತಾಲೂಕಿನಲ್ಲಿ ಮಟ್ಕಾ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಂದ ಬಡ ಕುಟುಂಬಗಳ ಜೀವನ ನಿರ್ವಹಣೆಗೆ ಕುತ್ತು ತಂದಿದೆ ಎಂದು ಆರೋಪಿಸಿದರು.