ಕರ್ನಾಟಕ

karnataka

ETV Bharat / state

ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಬಿ ಸಿ ಪಾಟೀಲ್ - ಕೋವಿಡ್ ಆಸ್ಪತ್ರೆಗೆ ಸಚಿವ ಬಿ.ಸಿ.ಪಾಟೀಲ್ ಭೇಟಿ

ತೀವ್ರ ಸಮಸ್ಯೆಗಳಿಲ್ಲದ ಸೋಂಕಿತರನ್ನು ತಾಲೂಕು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರತರದ ಸಮಸ್ಯೆಗಳಿದ್ದರೆ ಮಾತ್ರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ..

haveri
ಬಿ.ಸಿ.ಪಾಟೀಲ್

By

Published : Jul 6, 2020, 9:11 PM IST

ಹಾವೇರಿ :ಕೃಷಿ ಸಚಿವ ಬಿ ಸಿ ಪಾಟೀಲ್ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನಲ್ಲಿ ಸ್ಥಾಪಿತವಾಗಿರುವ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸೋಂಕಿತರ ಸಂಬಂಧಿಕರನ್ನು ಭೇಟಿಯಾದ ಸಚಿವರು, ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ರೋಗಿಗಳಿಗೆ ಚಿಕಿತ್ಸೆ,ಚೇತರಿಕೆ ಕುರಿತಂತೆ ವೈದ್ಯಾಧಿಕಾರಿಗಳನ್ನು ಪ್ರಶ್ನಿಸಿದರು. ಅಲ್ಲದೆ ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಸಂಖ್ಯೆ, ಔಷಧಿ ಕುರಿತಂತೆ ವಿಚಾರಿಸಿದರು.

ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರಿಗೆ ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸಲಹೆ ನೀಡಿದರು. ತೀವ್ರ ಸಮಸ್ಯೆಗಳಿಲ್ಲದ ಸೋಂಕಿತರನ್ನು ತಾಲೂಕು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರತರದ ಸಮಸ್ಯೆಗಳಿದ್ದರೆ ಮಾತ್ರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

ಸೋಂಕಿತರು ಆದಷ್ಟು ಬೇಗ ಗುಣಮುಖರಾಗಿ ಮನೆಗೆ ಮರಳುವಂತಾಗಲಿ ಎಂದು ಸಚಿವರು ಆಶಿಸಿದರು.

ABOUT THE AUTHOR

...view details