ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯನವರ ಆರೋಪದಲ್ಲಿ ಹುರುಳಿಲ್ಲ: ಭೈರತಿ ಬಸವರಾಜ್​​ - haveri latest news

ರಾಜ್ಯದಲ್ಲಿ ಲಾಕ್​ಡೌನ್ ಘೋಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕೊರೊನಾ ಪಾಸಿಟಿವ್ ಬಂದ ಪ್ರದೇಶಗಳನ್ನು ಮಾತ್ರ ಸೀಲ್​ ಡೌನ್​ ಮಾಡುತ್ತೇವೆ ಎಂದು ಸಚಿವ ಭೈರತಿ ಬಸವರಾಜ್​ ಸ್ಪಷ್ಟಪಡಿಸಿದರು.

minister bairati basavaraj
ಸಚಿವ ಬೈರತಿ ಬಸವರಾಜ್

By

Published : Jul 4, 2020, 4:28 PM IST

ಹಾವೇರಿ: ಕೋವಿಡ್-19 ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು.

ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಅವ್ಯವಹಾರ ನಡೆದಿದ್ದರೆ ದಾಖಲಾತಿಗಳನ್ನು ನೀಡಲಿ. ದಾಖಲಾತಿಗಳು ಸರಿಯಾಗಿದ್ದರೆ ಸರ್ಕಾರ ಕ್ರಮ ಕೈಗೊಳ್ಳತ್ತದೆ ಎಂದರು.

ರಾಜ್ಯ ಸರ್ಕಾರ ಕೊರೊನಾ ನಿಭಾಯಿಸುವಲ್ಲಿ ವಿಫಲವಾಗಿಲ್ಲ. ದೇಶದಲ್ಲಿಯೇ ಹೆಚ್ಚು ಜವಾಬ್ದಾರಿಯುತವಾಗಿ ಪರಿಸ್ಥಿತಿ ನಿರ್ವಹಣೆ ಮಾಡುತ್ತಿದ್ದೇವೆ ಎಂದರು.

ಸಚಿವ ಭೈರತಿ ಬಸವರಾಜ್

ರಾಜ್ಯದಲ್ಲಿ ಲಾಕ್​ಡೌನ್ ಘೋಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕೊರೊನಾ ಪಾಸಿಟಿವ್ ಬಂದ ಪ್ರದೇಶಗಳನ್ನು ಮಾತ್ರ ಸೀಲ್​ ಡೌನ್​ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಕೊರೊನಾ ವಿಷಯದಲ್ಲಿ ವಿರೋಧ ಪಕ್ಷದವರು ಕೆಲಸ ಮಾಡಬೇಕಾಗಿತ್ತು. ಆದರೆ ಸಿದ್ದರಾಮಯ್ಯ ಮನೆ ಬಿಟ್ಟು ಹೊರಗೆ ಬರುತ್ತಿಲ್ಲ ಎಂದು ಆರೋಪಿಸಿದರು.

ABOUT THE AUTHOR

...view details