ಹಾವೇರಿ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅದು ಇನ್ನಷ್ಟು ಕಡಿಮೆಯಾಗಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೋವಿಡ್ ಮರಣ ಪ್ರಮಾಣ ನಿಯಂತ್ರಣಕ್ಕೆ ಸಚಿವ ಬೊಮ್ಮಾಯಿ ಸೂಚನೆ
ಕೊರೊನಾ ಪಾಸಿಟಿವ್ ಪ್ರಕರಣಗಳಷ್ಟೇ ಅಲ್ಲಾ ಅದರಿಂದ ಸಂಭವಿಸುವ ಮರಣಗಳ ಸಂಖ್ಯೆ ಸಹ ಕಡಿಮೆ ಮಾಡುವುದು ಅವಶ್ಯಕವಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಪಾಸಿಟಿವ್ ಪ್ರಕರಣಗಳಷ್ಟೇ ಅಲ್ಲಾ, ಅದರಿಂದ ಸಂಭವಿಸುವ ಮರಣಗಳ ಸಂಖ್ಯೆ ಸಹ ಕಡಿಮೆ ಮಾಡುವದು ಅವಶ್ಯಕವಾಗಿದೆ. ಜಿಲ್ಲೆಯಲ್ಲಿ ಹೆಚ್ಚೆಚ್ಚು ಪರೀಕ್ಷೆಗಳನ್ನು ಮಾಡುವುದು ಜಾಗೃತಿ ಮೂಡಿಸುವ ಕೆಲಸವಾಗಬೇಕು. ಅಷ್ಟೇ ಅಲ್ಲದೆ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಅಂದಾಗ ಮಾತ್ರ ಕೊರೊನಾ ಪೀಡಿತರ ಸಂಖ್ಯೆ ಮತ್ತು ಅದರಿಂದ ಸಂಭವಿಸುವ ಮರಣಗಳ ಸಂಖ್ಯೆ ಕಡಿಮೆಯಾಗಲಿದೆ ಎಂದರು.
ಇದೇ ವೇಳೆ ಜಿಲ್ಲೆಯಲ್ಲಿ ನದಿ ಪಾತ್ರದಲ್ಲಿ ಸಂಭವಿಸಿದ ಬೆಳೆಹಾನಿಗೆ ಶೀಘ್ರವೇ ಪರಿಹಾರ ನೀಡುವ ಭರವಸೆಯನ್ನ ಸಚಿವರು ವ್ಯಕ್ತಪಡಿಸಿದರು. ರಾಜ್ಯದಲ್ಲಿ ಜಿಲ್ಲೆ ಅತಿಹೆಚ್ಚು ಬೆಳೆವಿಮೆ ಪಡೆಯುವ ಜಿಲ್ಲೆಯಾಗಿದೆ ಎಂದು ಸಚಿವ ಬೊಮ್ಮಾಯಿ ತಿಳಿಸಿದರು.