ಹಾವೇರಿ: ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅಧಿಕಾರಿಗಳ ಸಭೆ ನಡೆಸಿದ್ರು.
ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಸಭೆ - ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ
ಹಾವೇರಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅಧಿಕಾರಿಗಳ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಮಾಹಿತಿ ಪಡೆದರು. ಜತೆಗೆ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ, ಗ್ರಾಮೀಣ ಕುಡಿಯೋ ನೀರು ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದ್ರು. ಜೊತೆಗೆ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಲ್ಲಿ ಇಲಾಖೆ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡ್ರು.
ಜಿಲ್ಲೆಯಲ್ಲಿ ಕುಡಿಯೋ ನೀರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ರು. ಇದೇ ವೇಳೆ ಜಿಲ್ಲೆಯಲ್ಲಿ ಮಂದಗತಿಯಲ್ಲಿ ಸಾಗುತ್ತಿರೋ ಇಲಾಖೆಯ ಕಾಮಗಾರಿಗಳನ್ನ ತ್ವರಿತಗತಿಯಲ್ಲಿ ಮುಗಿಸಿ ಜನರಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.ಸಭೆಯಲ್ಲಿ ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.