ಹಾವೇರಿ: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಅದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ದೊಡ್ಡ ಪಕ್ಷ. ಹೀಗಾಗಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ದೊಡ್ಡ ದೊಡ್ಡ ಲಾಭಿ ನಡೆಯೋದು ಕಾಮನ್ ಎಂದರು.

ಇನ್ನು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗಡಿ ಪ್ರದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬೆಳಗಾವಿ, ನಿಪ್ಪಾಣಿ ಕಾರವಾರ ನಮ್ಮದು ಎನ್ನುತ್ತಿದ್ದಾರೆ. ಈ ಮೂರು ಪ್ರದೇಶಗಳು ಕರ್ನಾಟಕದ ಆರು ಕೋಟಿ ಜನರ ಆಸ್ತಿ. ಅಜಿತ್ ಪವಾರ್‌ಗೆ ಮಾಡಲು ಕೆಲಸವಿಲ್ಲ. ಅದಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಚಿವ ಸಂಪುಟದಿಂದ ನನ್ನನ್ನು ಕೈಬಿಡುವ ಪ್ರಶ್ನೆ ಕೇವಲ ಮಾಧ್ಯಮದಲ್ಲಿ ಕೇಳಿ ಬರುತ್ತಿದೆ. ಆದರೆ ಪಕ್ಷದ ಹೈಕಮಾಂಡ್ ಆಗಲಿ, ಸಿಎಂ ಆಗಲಿ ನನಗೆ ಯಾವುದೇ ಸೂಚನೆ ನೀಡಿಲ್ಲ. ಬದಲಿಗೆ ಉತ್ತಮವಾಗಿ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ, ಮರಾಠ ಅಭಿವೃದ್ದಿ ಪ್ರಾಧಿಕಾರಕ್ಕೂ ಮರಾಠಿಗಳ ಓಲೈಕೆಗೂ ಸಂಬಂಧವಿಲ್ಲ. ರಾಜ್ಯದಲ್ಲಿರುವ ಮರಾಠಿಗರಿಗಾಗಿ ನಿಗಮ ಸ್ಥಾಪಿಸಲಾಗಿದೆ. ನಿಗಮ ಸ್ಥಾಪನೆಗೆ ನಾನು ಮನವಿ ಮಾಡಿದ್ದೆ ಎಂದು ತಿಳಿಸಿದರು.