ಹಾವೇರಿ: ಜಿಲ್ಲೆಯಲ್ಲಿ ಸಡಗರ, ಸಂಭ್ರಮದಿಂದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಯಿತು. ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದರು. ನಂತರ ಸಿಂಗರಿಸಿದ ತೆರೆದ ವಾಹನದಲ್ಲಿ ಸಂಚರಿಸಿದ ಸಚಿವರು ವಿವಿಧ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು.
ಇದಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಹೆಬ್ಬಾರ್, "ಸರ್ಕಾರದ ಜಾಹೀರಾತಿನಲ್ಲಿ ನೆಹರು ಹೆಸರು ಇಲ್ಲದಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್‌ನವರು ಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಮೂಲಕ ಅನಗತ್ಯ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ" ಎಂದರು.