ಹಾವೇರಿ : ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಈಗಾಗಲೇ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ. ಅವರಿಗೆ ಸ್ವಾಗತ ಎಂದು ಜಿಲ್ಲಾ ಉಸ್ತುವಾರಿ ಮತ್ತು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಶುಭ ಕೋರಿದರು. ನಗರದಲ್ಲಿ ನಡೆಯುತ್ತಿರುವ ಮೆಡಿಕಲ್ ಕಾಲೇಜ್ ಕಾಮಗಾರಿ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಸಚಿವರು ಮಾತನಾಡಿದರು.
ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತ - ಹಾವೇರಿಯಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆ
ಬಸವರಾಜ್ ಹೊರಟ್ಟಿ ಬಿಜೆಪಿ ಸೇರುತ್ತಿರುವುದನ್ನು ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತಿಸಿದ್ದಾರೆ. ಇದೇ ವೇಳೆ ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿ, ಸಿಎಂ ಈ ವಾರದಲ್ಲಿ ಉನ್ನತ ಮಟ್ಟದ ಸಭೆ ಕರೆಯಲಿದ್ದಾರೆ. ಉನ್ನತ ಮಟ್ಟದ ಸಭೆ ನಂತರ ದಿನಾಂಕ ಅಂತಿಮವಾಗುತ್ತದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ನಡಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಸಚಿವ ಹೆಬ್ಬಾರ್, ಸಿಎಂ ಈ ವಾರದಲ್ಲಿ ಉನ್ನತ ಮಟ್ಟದ ಸಭೆ ಕರೆಯಲಿದ್ದಾರೆ. ಉನ್ನತ ಮಟ್ಟದ ಸಭೆ ನಂತರ ದಿನಾಂಕ ಅಂತಿಮವಾಗುತ್ತದೆ. ಸಮ್ಮೇಳನವನ್ನ ಐತಿಹಾಸಿಕವಾಗಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇದೇ ಪ್ರಥಮ ಬಾರಿಗೆ ಸರ್ಕಾರ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ.ಯನ್ನು ಬಜೆಟ್ನಲ್ಲಿ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ಸ್ವಲ್ಪ ವಸತಿ ಸಮಸ್ಯೆ ಇರುವ ಕಾರಣ, ಸಮ್ಮೇಳನದ ಪೂರ್ವ ತಯಾರಿ ನಡೆಸಬೇಕಿದೆ ಎಂದು ಮಾಹಿತಿ ನೀಡಿದರು.
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಸಾಹಿತಿಗಳನ್ನು ಸಮಧಾನವಾಗಿ ಕಳಿಸುವ ಜವಾಬ್ದಾರಿ ಇದೆ. ಹೀಗಾಗಿ ಸಮ್ಮೇಳನಕ್ಕೆ ಎಚ್ಚರಿಕೆ ರೀತಿಯಲ್ಲಿ ತಯಾರಿ ನಡೆಸಲಾಗುತ್ತದೆ. ನಗರದ ಮೆಡಿಕಲ್ ಕಾಲೇಜ್ ಕಾಮಗಾರಿ ಡಿಸೆಂಬರ್ ಅಂತ್ಯದಲ್ಲಿ ಮುಕ್ತಾಯಗೊಳ್ಳಲಿದೆ. ಬರುವ ವರ್ಷದಿಂದ 150 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದು, ಮೆಡಿಕಲ್ ಓದಲಿದ್ದಾರೆ ಎಂದರು. ಹಿಜಾಬ್, ಹಲಾಲ್ ಕಟ್, ಹಜಾನ್ ಸೇರಿದಂತೆ ಯಾವುದೇ ವಿವಾದಾತ್ಮಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಹೆಬ್ಬಾರ್ ಸ್ಪಷ್ಟಪಡಿಸಿದರು.