ಹಾವೇರಿ:ಸಚಿವ ಸಂಪುಟ ವಿಸ್ತರಣೆ ಕುರಿತು ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಮೂಲ ವಲಸಿಗ ಇಲ್ಲ ಎಲ್ಲರೂ ಒಂದೇ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇದೆಲ್ಲಾ ಪ್ರತಿಪಕ್ಷದವರ ಸೃಷ್ಟಿ ಎಂದು ತಿಳಿಸಿದರು. ನಾವು ಬಿಜೆಪಿಗೆ ಬಂದೆ ಚುನಾವಣೆಯಲ್ಲಿ ಆರಿಸಿ ಬಂದಿದ್ದೇವೆ. ಬಿಜೆಪಿಯಲ್ಲಿ ನಮ್ಮನ್ನು ಮನೆಯ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ನಮ್ಮಲ್ಲಿ ಯಾವುದೇ ಭೇದಭಾವವಿಲ್ಲ ಎಂದು ತಿಳಿಸಿದರು.
ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಸಚಿವರು. ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು ಅದು ಸಿಎಂಗೆ ಬಿಟ್ಟ ವಿಚಾರ ಎಂದರು. ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷರ ನಳೀನಕುಮಾರ್ ಕಟೀಲ್ ಬುದ್ದಿ ಬೆಳೆದಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಅವರು ಸಮರ್ಥ ಇರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ವೀರಶೈವ್ ಲಿಂಗಾಯತಕ್ಕೆ ಓಬಿಸಿ ಸೇರಿಸುವುದಕ್ಕೆ ತಾನು ಸಹ ಬೆಂಬಲಿಸುತ್ತೇನೆ ಎಂದು ತಿಳಿಸಿದರು.
ಇನ್ನು ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮುಂದುವರೆಯಲಿದ್ದಾರೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲಾ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪ ನಂತರದ ಮುಖ್ಯಮಂತ್ರಿಗಳ ಹೆಸರಲ್ಲಿ ತಮ್ಮ ಹೆಸರಿರುವ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸಿ.ಎಂ.ಯಡಿಯೂರಪ್ಪ ಮುಖ್ಯಮಂತ್ರಿ ನೇತೃತ್ವದಲ್ಲಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆ. ಈ ಕುರಿತಂತೆ ಯಾವುದೇ ವಿಚಾರಗಳಿಗೆ ಅವಕಾಶವಿಲ್ಲ. ಸಿ.ಎಂ.ಯಡಿಯೂರಪ್ಪ ಅವಧಿಯಲ್ಲಿ ರಾಜ್ಯ ಅಭಿವೃದ್ಧಿ ಕಾಣಲಿದೆ. ಕೊರೊನಾ ನೆರೆ ಹಾವಳಿಯಲ್ಲಿ ಸಹ ರಾಜ್ಯ ಅಭಿವೃದ್ಧಿ ಪಥದಲ್ಲಿ ಚಲಿಸುತ್ತಿದೆ ಎಂದು ತಿಳಿಸಿದರು.
ಇನ್ನು ಸಿ.ಎಂ.ಯಡಿಯೂರಪ್ಪ ಸಚಿವ ಸ್ಥಾನ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಆರ್.ಶಂಕರ್ ಅಭಿಪ್ರಾಯಪಟ್ಟಿದ್ದಾರೆ. ತಾವು 17 ಜನ ಸೇರಿದ್ದಕ್ಕೂ ಸಂಪುಟ ವಿಸ್ತರಣೆ ಒತ್ತಡ ಹಾಕಲು ಅಲ್ಲ. ಸಮಾನ ಮನಸ್ಕರು ಸೇರಬೇಕು ಎಂದು ಹಿರಿಯರು ಕರೆದಿದ್ದರು. ಹಾಗಾಗಿ ನಾನು ಭೋಜನ ಕೂಟಕ್ಕೆ ಹೋಗಿದ್ದೆ ಎಂದು ತಿಳಿಸಿದರು.
ಸಚಿವ ಸ್ಥಾನ ನೀಡುವುದಕ್ಕೂ ಮತ್ತು ವಿಷಯ ನ್ಯಾಯಾಲಯದಲ್ಲಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಈಗಾಗಲೇ ನಾವು ಎಂಎಲ್ಸಿಯಾಗಿ ಆಯ್ಕೆಯಾಗಿದ್ದೇವೆ. ಸಂಪುಟದಲ್ಲಿ ಸೇರಿಸಿಕೊಳ್ಳುವ ಕುರಿತಂತೆ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರ್.ಶಂಕರ್ ತಿಳಿಸಿದರು.