ಕರ್ನಾಟಕ

karnataka

ETV Bharat / state

ಸಚಿವ ಸ್ಥಾನ ತಪ್ಪಲು ಬೊಮ್ಮಾಯಿ ಕಾರಣ: ಓಲೇಕಾರ್ ಆರೋಪ - ಹಾವೇರಿ ಸುದ್ದಿ

ಸಚಿವ ಸ್ಥಾನ ತಪ್ಪಲು ಸಿಎಂ ನನಗೆ ಮೋಸ ಮಾಡಿದ್ದಾರೆ. ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಸಭೆ ಕರೆದು ಚರ್ಚಿಸುತ್ತೇನೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ.

Haveri
ಶಾಸಕ ನೆಹರು ಓಲೇಕಾರ್

By

Published : Aug 5, 2021, 1:54 PM IST

Updated : Aug 5, 2021, 2:27 PM IST

ಹಾವೇರಿ:ನನಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಸದ್ಯ ಜವಾಬ್ದಾರಿ ತೆಗೆದುಕೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಕಾರಣ ಎಂದು ಹಾವೇರಿ ಶಾಸಕ ನೆಹರು ಓಲೇಕಾರ್ ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸ್ಥಾನ ಸಿಗದಿರುವ ಹಿನ್ನೆಲೆ ಅವರು ಈ ರೀತಿ ಅಸಮಾಧಾನ ಹೊರಹಾಕಿದ್ದಾರೆ.

ಹಾವೇರಿ ಶಾಸಕ ನೆಹರು ಓಲೇಕಾರ್

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಮೊದಲೇ ಸಿಎಂಗೆ ವಿನಂತಿ ಮಾಡಿದ್ದೆ. ದೆಹಲಿಗೆ ಹೋಗಿ ಬಂದ ಬಳಿಕ ಮಾತನಾಡುತ್ತೇನೆ ಎಂದಿದ್ದರು. ಆದರೆ ಸಚಿವರ ಲಿಸ್ಟ್​ನಲ್ಲಿ ನನ್ನ ಹೆಸರು ಇರಲಿಲ್ಲ. ಇದು ವಿಷಾದದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಸಚಿವ ಸ್ಥಾನ ತಪ್ಪಲು ಸಿಎಂ ನನಗೆ ಮೋಸ ಮಾಡಿದ್ದಾರೆ. ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಸಭೆ ಕರೆದು ಚರ್ಚಿಸುತ್ತೇನೆ ಎಂದು ತಿಳಿಸಿದರು. ವರಿಷ್ಠರ ಸಹಮತವಿದ್ದರೂ ಸಹ ಬೊಮ್ಮಾಯಿಯವರೇ ನನಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಈಗ ಸಚಿವ ಸ್ಥಾನ ಸಿಗದ ಶಾಸಕರನ್ನ ಭೇಟಿ ಮಾಡಿಲ್ಲ. ನಾಳೆಯಿಂದ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಸಿಎಂ ಬೊಮ್ಮಾಯಿ ಮನಸ್ಸು ಮಾಡಿದರೆ ಉಳಿದ ನಾಲ್ಕು ಖಾತೆಗಳಲ್ಲಿ ಸಚಿವ ಸ್ಥಾನ ನೀಡಬಹುದು. ಆದರೆ ಅವರು ಮನಸ್ಸು ಮಾಡುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.

Last Updated : Aug 5, 2021, 2:27 PM IST

ABOUT THE AUTHOR

...view details