ಹಾವೇರಿ: ಕಾರ್ಮಿಕರು, ಕ್ಷೌರಿಕರು ಹಾಗೂ ಆಟೋ ಚಾಲಕರಿಗೆ ಶಾಸಕ ನೆಹರು ಓಲೆಕಾರ್ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿದರು.
ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಮಿಕರು, ಕ್ಷೌರಿಕರು ಮತ್ತು ಆಟೋ ಚಾಲಕರು ಸರತಿಯಲ್ಲಿ ನಿಂತು, ಸಾಮಾಜಿಕ ಅಂತರ ಕಾಯ್ದುಕೊಂಡು ದಿನಸಿ ಕಿಟ್‌ಗಳನ್ನು ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ನೆಹರು ಓಲೇಕಾರ್, ಕೊರೊನಾದಿಂದ ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಬದಲಿಗೆ ಕೊರೊನಾ ಬರದಂತೆ ತಡೆಯುವ ಕ್ರಮಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಹೇಳಿದರು.
ಸರ್ಕಾರ ಯಾರಿಗೂ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳುತ್ತಿದೆ. ಕಿಟ್ ಎಲ್ಲರಿಗೂ ತಲುಪುವಂತೆ ಸರ್ಕಾರ ನೋಡಿಕೊಳ್ಳುತ್ತಿದೆ ಎಂದು ತಿಳಿಸಿದರು.