ಹಾವೇರಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ವಕೀಲರ ಸಂಘದ ಕಟ್ಟಡದ ಉದ್ಘಾಟನೆ ನೆರವೇರಿಸಿದರು. ಈ ಕಾರ್ಯಕ್ರಮಕ್ಕೆ ಹಾವೇರಿ ಶಾಸಕ ನೆಹರು ಓಲೇಕಾರ್ ಹೆಸರು ಕೈಬಿಟ್ಟಿದ್ದರಿಂದ ಓಲೇಕಾರ್ ಅಭಿಮಾನಿಗಳು ಸಿಎಂ ಬೊಮ್ಮಾಯಿಗೆ ಕಪ್ಪುಬಟ್ಟೆ ತೋರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ಓಲೇಕಾರ್ ಅಭಿಮಾನಿಗಳನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಮತ್ತು ಹಾವೇರಿ ಶಾಸಕರಾಗಿರುವ ನೆಹರು ಓಲೇಕಾರ್ ಹೆಸರು ಕೈಬಿಟ್ಟಿದ್ದಕ್ಕೆ ಓಲೇಕಾರ್ ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಸಿಎಂ ಮತ್ತು ಸರ್ಕಾರದ ವಿರುದ್ಧ ಭಾನುವಾರ ಕಪ್ಪುಬಟ್ಟೆ ಪ್ರದರ್ಶಿಸಲು ಮುಂದಾಗಿದ್ದರು.