ಕರ್ನಾಟಕ

karnataka

ETV Bharat / state

ಹಾವೇರಿ: ಹಾಲು ಸೇವಿಸಿ 12ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ - ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಗೆ ಊಟದ ಜೊತೆಗೆ ಪೂರೈಕೆಯಾಗಿದ್ದ ಹಾಲು ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

More than 12 students are sick after drinking milk
ಹಾಲು ಸೇವಿಸಿ 12ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

By

Published : Sep 23, 2022, 10:32 PM IST

ಹಾವೇರಿ:ಹಾಲು ಸೇವಿಸಿ ಹನ್ನೆರಡಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ದುಂಡಶಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿವೇಕಾನಂದ ಪ್ರೌಢಶಾಲೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ತಲೆನೋವು, ಸುಸ್ತು ಸೇರಿದಂತೆ ಅಲ್ಪಪ್ರಮಾಣದ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಐದು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಲೆಗೆ ಊಟದ ಜೊತೆಗೆ ಪೂರೈಕೆಯಾಗಿದ್ದ ಹಾಲು ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲೂಕು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಕಲುಷಿತ ನೀರು ಕುಡಿದು ಪೆಂಚನಹಳ್ಳಿ ಗ್ರಾಮಸ್ಥರು ಅಸ್ವಸ್ಥ

ಹಾಲು ಸೇವಿಸಿ 12ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ABOUT THE AUTHOR

...view details