ಹಾವೇರಿ: ತನ್ನ ಎರಡು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ವರದಾಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ವರದಾಹಳ್ಳಿಯಲ್ಲಿ ಎರಡು ಮಕ್ಕಳೊಂದಿಗೆ ತಾಯಿ ನಾಪತ್ತೆ
ತನ್ನಎರಡು ಮಕ್ಕಳ ಜೊತೆ ಮನೆಯಿಂದ ಹೊರಹೋದ ಮಹಿಳೆ ಮತ್ತೆ ಮನೆಗೆ ಬಂದಿಲ್ಲ. ಈ ಹಿನ್ನೆಲೆ ಕುಟುಂಬ ದೂರು ದಾಖಲು ಮಾಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಕ್ಕಳೊಂದಿಗೆ ತಾಯಿ ನಾಪತ್ತೆ
30 ವರ್ಷದ ಶೈಲಾ ಮಹಾವೀರಪ್ಪ ತಡಸ ಎಂಬ ಮಹಿಳೆ ನಾಪತ್ತೆಯಾಗಿದ್ದಾರೆ. ಶೈಲಾ ತನ್ನಎರಡು ಮಕ್ಕಳದಾ 9 ವರ್ಷದ ಅಭಿಷೇಕ, 6 ಆರು ವರ್ಷದ ಅನು ಕರೆದುಕೊಂಡು ಮನೆಯಿಂದ ಹೊರಗೆ ಹೋದವರು ಮತ್ತೆ ವಾಪಸ್ ಮನೆಗೆ ಬಂದಿಲ್ಲ ಎನ್ನಲಾಗಿದೆ.
ಈ ಕುರಿತಂತೆ ಹಾವೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಇವರ ಸುಳಿವು ಸಿಕ್ಕರೆ ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.