ಕರ್ನಾಟಕ

karnataka

ETV Bharat / state

ಅಧಿಕಾರಕ್ಕಾಗಿ ಮತ್ತೆ ಜೆಡಿಎಸ್​​​​​​​ ಬಳಿ ಸಿದ್ದರಾಮಯ್ಯ ಭಿಕ್ಷೆ ಬೇಡ್ತಿದ್ದಾರೆ: ಕಟೀಲ್​​​​ ವಾಗ್ದಾಳಿ - By-election in Karnataka

ರಟ್ಟಿಹಳ್ಳಿಯಲ್ಲಿ ನಡೆದ ರೋಡ್​​ ಶೋನಲ್ಲಿ ನಳಿನ್​ ಕುಮಾರ್​ ಕಟೀಲ್​, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Nalin Kumar Kateel
ನಳಿನ್​ ಕುಮಾರ್​ ಕಟೀಲ್

By

Published : Dec 2, 2019, 5:52 PM IST

ಹಾವೇರಿ: ಮೈತ್ರಿ ಸರ್ಕಾರ ಕೆಡವಲು ಕಾರಣರಾಗಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಅಧಿಕಾರಕ್ಕಾಗಿ ಹೆಚ್​.ಡಿ.ಕುಮಾರಸ್ವಾಮಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಟೀಕಿಸಿದರು.

ನಳಿನ್​ ಕುಮಾರ್​ ಕಟೀಲ್

ಹಾವೇರಿಯ ರಟ್ಟಿಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಅವರಿಗೆ ಏಕಾಂಗಿಯಾಗಿ ಹೋರಾಡಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ವಿಶ್ವಾಸ ಕಳೆದುಕೊಂಡಿದ್ದಾರೆ. ಜೆಡಿಎಸ್ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ಮಾಜಿ ಶಾಸಕ ಯು.ಬಿ.ಬಣಕಾರ್​​​ ಮತ್ತು ಸಂಸದ ಬಿ.ವೈ.ರಾಘವೇಂದ್ರ ಇದ್ದರು.

ABOUT THE AUTHOR

...view details